GULBARGA VARTHE

GULBARGA VARTHE

Tuesday, 31 January 2017

news Date: 31---01---2017

ಪ್ರವಾಸೋದ್ಯಮ ಸಚಿವರ ಪ್ರವಾಸ
**********************************
ಕಲಬುರಗಿ,ಜ.31.(ಕ.ವಾ.)-ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ ಖರ್ಗೆ ಅವರು ಹೈದ್ರಾಬಾದಿನಿಂದ ರಸ್ತೆ ಮೂಲಕ ಫೆಬ್ರವರಿ 1ರಂದು ಮಧ್ಯಾಹ್ನ 3 ಗಂಟೆಗೆ ಯಾದಗಿರಿಗೆ ಆಗಮಿಸುವರು. ನಂತರ ಸಚಿವರು ಮಧ್ಯಾಹ್ನ 3 ಗಂಟೆಗೆ ಯಾದಗಿರಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಫೆಬ್ರವರಿ 2ರಂದು ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣಿಸಿ, ಬೆಳಿಗ್ಗೆ 10.30 ಗಂಟೆಗೆ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಫೆಬ್ರವರಿ 3ರಂದು ಕಲಬುರಗಿಯಿಂದ ಚಿತ್ತಾಪುರಕ್ಕೆ ಪ್ರಯಾಣಿಸಿ, ಬೆಳಿಗ್ಗೆ 10 ಗಂಟೆಗೆ ಚಿತ್ತಾಪುರದಲ್ಲಿ ಹಾಗೂ ಮಧ್ಯಾಹ್ನ 2 ಗಂಟೆಗೆ ಯಾದಗಿರಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಫೆಬ್ರವರಿ 4ರಂದು ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣಿಸಿ, ಬೆಳಿಗ್ಗೆ 9.30 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ಯಾದಗಿರಿ ಜಿಲ್ಲಾಡಳಿತ ಭವನ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಯಾದಗಿರಿಯಿಂದ ಕಲಬುರಗಿಗೆ ಆಗಮಿಸುವರು. ನಂತರ ಸಚಿವರು ರಾತ್ರಿ 9.05 ಗಂಟೆಗೆ ಕಲಬುರಗಿಯಿಂದ ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು.

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
**************************************************
ಕಲಬುರಗಿ,ಜ.31.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಅವರು ಫೆಬ್ರವರಿ 1ರಂದು ಹೈದ್ರಾಬಾದಿನಿಂದ ಕಲಬುರಗಿಗೆ ರಸ್ತೆ ಮೂಲಕ ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಸಚಿವರು ಅಂದು ಮಧ್ಯಾಹ್ನ 4.30 ಗಂಟೆಗೆ ಕಲಬುರಗಿ ರಿಂಗ್‍ರೋಡ ರಸ್ತೆಯ ಭವಾನಿನಗರದ ಮುತ್ಯಾನ ಬಬಲಾದ ಶ್ರೀ ಚೆನ್ನಕೇಶ್ವರ ವಿರಕ್ತಮಠದ ಕಾರ್ಯಕ್ರಮದಲ್ಲಿ ಹಾಗೂ ರಾತ್ರಿ 7 ಗಂಟೆಗೆ ಹೊನ್ನಕಿರಣಗಿ ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಫೆಬ್ರವರಿ 2ರಂದು ಬೆಳಿಗ್ಗೆ 10.30 ಗಂಟೆಗೆ ಚಿಂಚೋಳಿಯ ಹಾರ್ಕೂಡು ಮಠದಲ್ಲಿ ಚಿಂಚೋಳಿ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಫೆಬ್ರವರಿ 3ರಂದು ದುದಿನಿ ಅಜ್ಜಾರವರ ಧ್ಯಾನಮಂದಿರ ಉದ್ಘಾಟನಾ ಕಾರ್ಯಕ್ರಮ, ಸಾಯಂಕಾಲ 4 ಗಂಟೆಗೆ ಬುರುಗಪಲ್ಲಿ ಶಾಲಾ ಕಾರ್ಯಕ್ರಮದಲ್ಲಿ, ಖಾನಗಡ್ಡ ಗ್ರಾಮದಲ್ಲಿ ಏರ್ಪಡಿಸಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಗೂ ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸಚಿವರು ಫೆಬ್ರವರಿ 4ರಂದು ಮುಖ್ಯಮಂತ್ರಿಗಳೊಂದಿಗೆ ಯಾದಗಿರಿ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ದುದಿನಿ ಅಜ್ಜಾರವರ 75ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಫೆಬ್ರವರಿ 5 ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಫೆಬ್ರುವರಿ 6ರಂದು ಅಂಚೆ ಜೀವ ವಿಮೆ ಏಜೆಂಟರ್ ನೇಮಕಕ್ಕೆ ಸಂದರ್ಶನ
**********************************************************************
ಕಲಬುರಗಿ,ಜ.31.(ಕ.ವಾ.)-ಕಲಬುರಗಿ ಅಂಚೆ ಕಚೇರಿಯಿಂದ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಅಂಚೆ ಇಲಾಖೆಯ ಅಂಚೆ ಜೀವ ವಿಮೆ (ಪಿ.ಎಲ್.ಐ.) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಗಳ (ಆರ್.ಪಿ.ಎಲ್.ಐ.) ವಹಿವಾಟಿಗಾಗಿ ನೇರ ಏಜೆಂಟರುಗಳ ನೇಮಕಾತಿಗಾಗಿ 2017ರ ಫೆಬ್ರವರಿ 6ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಸಂದರ್ಶನ ಜರುಗಲಿದೆ ಎಂದು ಕಲಬುರಗಿ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕ ಎನ್. ಪ್ರಕಾಶ ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಪಿ.ಯು.ಸಿ. ಪಾಸಾದ ಅಂಕಪಟ್ಟಿ ಹಾಗೂ ಆಧಾರ ಕಾರ್ಡ್ ಮೂಲ ದಾಖಲಾತಿ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಬೇರೆ ಯಾವುದೇ ಇನ್ಸೂರೆನ್ಸ್ ಕಂಪನಿಯ ಏಜೆಂಟರು ಆಗಿರಬಾರದು. ಹೆಚ್ಚಿನ ಮಾಹಿತಿಗಾಗಿ ಪಿ.ಎಲ್.ಐ. ಗ್ರೂಪ್ ಲಿಡರ್ ವಿಜಯಕುಮಾರ ಬಬಲಾದಿ ಮೊಬೈಲ್ ಸಂಖ್ಯೆ 9886248554 ಹಾಗೂ ಕಲಬುರಗಿಯ ವರಿಷ್ಠ ಅಂಚೆ ಅಧೀಕ್ಷಕರ ಕಾರ್ಯಾಲಯದ ದೂರವಾಣಿ ಸಂಖ್ಯೆ 08472-263800, 263801ಗಳನ್ನು ಸಂಪರ್ಕಿಸಬೇಕು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ನಗರ ಮತ್ತು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ಬಿ.ಇಡಿ. ಕೋರ್ಸಿಗೆ ದಾಖಲಾತಿ: ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ
ಕಲಬುರಗಿ,ಜ.31.(ಕ.ವಾ.)-ಪ್ರಸಕ್ತ 2016-17ನೇ ಸಾಲಿನ ಬಿ.ಇಡಿ. ಕೋರ್ಸಿನ ದಾಖಲಾತಿಗೆ ಸಂಬಂಧಿಸಿಂತೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು 2017ರ ಫೆಬ್ರವರಿ 4ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಶಿಕ್ಷಕರ ಶಿಕ್ಷಣ (ಬಿ.ಇಡಿ) ಮಹಾವಿದ್ಯಾಲಯದ ವ್ಯವಸ್ಥಾಪಕ ಕೇಂದ್ರದಲ್ಲಿ ಜರುಗಲಿದೆ ಎಂದು ಕಲಬುರಗಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ಪಿಎಸ್‍ಐ-ಆರ್‍ಎಸ್‍ಐ ನೇಮಕಾತಿಯ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
ಕಲಬುರಗಿ,ಜ.31.(ಕ.ವಾ.)-ಪಿಎಸ್‍ಐ ಸಿವಿಲ್ (ಮಹಿಳಾ/ಸೇವಾನಿರತ) ರವರನ್ನೊಳ ಗೊಂಡ ನೇಮಕಾತಿ ಪ್ರಕ್ರಿಯೆಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.)ಯನ್ನು 2017ರ ಫೆಬ್ರವರಿ 1 ರಿಂದ 10 ರವರೆಗೆ ಹಾಗೂ ಆರ್‍ಎಸ್‍ಐ (ಸಿ.ಎ.ಆರ್./ಡಿ.ಎ.ಆರ್.) ರವರುಗಳ (ಸೇವಾನಿರತ) ರವರನ್ನೊಳಗೊಂಡ ನೇಮಕಾತಿ ಪ್ರಕ್ರಿಯೆಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.)ಯನ್ನು ಫೆಬ್ರವರಿ 13ರಂದು ಕಲಬುರಗಿ ಜಿಲ್ಲಾ ಸಶಸ್ತ್ರ ಪೊಲೀಸ್ ಮೈದಾನದಲ್ಲಿ ನಡೆಯಲಿದೆ ಎಂದು ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಆಲೋಕ ಕುಮಾರ್ ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಈಗಾಗಲೇ ಸಂದೇಶವನ್ನು ರವಾನಿಸಲಾಗಿದೆ. ಆದ್ದರಿಂದ ಅಭ್ಯರ್ಥಿಗಳು ತಮಗೆ ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.) ಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ. '

ಜೇವರ್ಗಿ ಪಟ್ಟಣದ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ
*******************************************************
ಕಲಬುರಗಿ,ಜ.31.(ಕ.ವಾ.)-ಜೇವರ್ಗಿ ಪಟ್ಟಣದ ಸಾರ್ವಜನಿಕರು ಪಟ್ಟಣದ ಸರ್ವೇ ನಂ. 31/1ರ ವಿನ್ಯಾಸದಲ್ಲಿ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿರಿಸಿದ ಸ್ಥಳದಲ್ಲಿ 100ಘಿ100 ಚದರ ಅಡಿ ಸ್ಥಳವನ್ನು ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ (ಹೊಸ) ಕಟ್ಟಡಕ್ಕೆ ಸಿ.ಎ. ನಿವೇಶನ ಹಂಚಿಕೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಜೇವರ್ಗಿ ಪಟ್ಟಣದ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಇದಕ್ಕಾಗಿ ಸಾರ್ವಜನಿಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ/ತಕರಾರುಗಳನ್ನು 2017ರ ಫೆಬ್ರವರಿ 07ರೊಳಗಾಗಿ ಜೇವರ್ಗಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ನಿಗದಿತ ಅವಧಿ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 4ರಂದು ಹೇರೂರ(ಬಿ) ಗ್ರಾಮದಲ್ಲಿ ಜನಸ್ಪಂದನ ಸಭೆ
*************************************************************
ಕಲಬುರಗಿ,ಜ.31.(ಕ.ವಾ.)-ಕಲಬುರಗಿ ತಾಲೂಕಿನ ಹೇರೂರ(ಬಿ) ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಫೆಬ್ರವರಿ 4ರಂದು ಬೆಳಿಗ್ಗೆ 11 ಗಂಟೆಗೆ ಜನಸ್ಪಂದನ ಏರ್ಪಡಿಸಲಾಗಿದೆ ಎಂದು ಕಲಬುರಗಿ ತಹಸೀಲ್ದಾರರು ತಿಳಿಸಿದ್ದಾರೆ.
ಹೇರೂರ(ಬಿ) ಗ್ರಾಮ ಪಂಚಾಯತಿಗೊಳಪಟ್ಟ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಖುದ್ದಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.
ವಿದ್ಯುತ ಮಾರ್ಗದ ಸಮೀಪ ಹೋಗದಂತೆ ಸೂಚನೆ
ಕಲಬುರಗಿ,ಜ.31.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಗ್ರಾಮೀಣ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಆಳಂದ ತಾಲೂಕಿನ ಕೆಳಕಂಡ ಉಪ ವಿತರಣಾ ಕೇಂದ್ರದಿಂದ ಹೊರಹೋಗುವ ನಿರಂತರ ಜ್ಯೋತಿ ಯೋಜನೆಯಡಿ ಹೊಸದಾಗಿ ನಿರ್ಮಿಸಲಾದ 11 ಕೆ.ವಿ. ಲಾಡ್ ಮುಗಳಿ ಮಾರ್ಗವು 2017ರ ಫೆಬ್ರವರಿ 1ಕ್ಕೆ ಕಾರ್ಯಾರಂಭಗೊಳ್ಳಲಿದೆ. ಈ ಮಾರ್ಗವು ಕೆಳಕಂಡ ಹಳ್ಳಿಗಳ ಸರಹದ್ದಿನಲ್ಲಿ ಹಾದು ಹೋಗುತ್ತದೆ ಎಂದು ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ ಕಾರ್ಯ ಮತ್ತು ಪಾಲನೆ ವಿಭಾಗ-1ರ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.
ಲಾಡ್ ಮುಗಳಿ ಫೀಡರಿನ 33/11 ಕೆ.ವಿ. ವಿ.ಕೆ. ಸಲಗರ್ ವಿತರಣಾ ಕೇಂದ್ರದ ಫೀಡರಿನ ಮೇಲೆ ಬರುವ ಗ್ರಾಮಗಳಾದ ಅಂಬಲಗಾ, ಅಂಬಲಗಾ ತಾಂಡಾ, ಅಪಚಂದ್, ಹೊಡಲ್, ಹೊಡಲ್ ತಾಂಡಾ, ಕುಡಮುಡ್, ಕುಡಮುಡ್ ತಾಂಡಾ, ಕಲಕುಟಗಾ, ಲಾಡ್ ಮುಗಳಿ, ಲಾಡ್ ಮುಗಳಿ ತಾಂಡಾ, ಲೆಂಗಟಿ, ಮಡಕಿ, ಮಡಕಿ ತಾಂಡಾ, ಮುದ್ದಡಗಾ, ಮುರಡಿ, ಮುರಡಿ ತಾಂಡಾ ಮತ್ತು ಶ್ರೀಚಂದ ಗ್ರಾಮಗಳ ವ್ಯಾಪ್ತಿಯಲ್ಲಿರುವ ಜನರು ಈ ಮಾರ್ಗದ ಸಮೀಪ ಹೋಗಬಾರದು, ಕಂಬಗಳನ್ನು ಏರಬಾರದು, ಕಂಬಗಳ ಸಮೀಪದಲ್ಲಿ ಜಾನುವಾರುಗಳನ್ನು ಬಿಡಬಾರದೆಂದು ಕಾರ್ಯನಿರ್ವಾಹಕ ಇಂಜಿನಿಯರರು ಸಾರ್ವಜನಿಕರಲ್ಲಿ ಕೋರಿದ್ದಾರೆ. ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರೂ ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸಕರಣ ನಿಗಮ ನಿಯಮಿತವು ಜವಾಬ್ದಾರಿಯಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಮೂಲಭೂತ ಸೌಕರ್ಯಾಭಿವೃದ್ಧಿ ಅಧ್ಯಕ್ಷರ ಪ್ರವಾಸ
***********************************************************
ಕಲಬುರಗಿ,ಜ.31.(ಕ.ವಾ.)-ಕರ್ನಾಟಕ ಮೂಲಭೂತ ಸೌಕರ್ಯಾಭಿವೃದ್ಧಿ ಅಧ್ಯಕ್ಷ ಹಾಗೂ ಹುಮನಾಬಾದ ಶಾಸಕ ರಾಜಶೇಖರ ಪಾಟೀಲ ಅವರು ಹುಮನಾಬಾದ್‍ದಿಂದ ರಸ್ತೆ ಮೂಲಕ ಫೆಬ್ರವರಿ 3ರಂದು ಬೆಳಗಿನ 10.15 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಧ್ಯಕ್ಷರು ಅಂದು ಬೆಳಿಗ್ಗೆ 10.30 ಗಂಟೆಗೆ ಕೆಸರಟಗಿ ರಸ್ತೆಯ ಆಕಾಶವಾಣಿ ಕೇಂದ್ರದ ಹಿಂದುಗಡೆಯಿರುವ ಸಮಾದಾನ ಆವರಣದಲ್ಲಿ ಪೂಜ್ಯ ಮೌನ ತಪಸ್ವಿ ಶ್ವೇತ ಶಾಂತ ಶ್ರೀ ಜಡೆಯ ಶಾಂತಲಿಂಗೇಶ್ವರ ಸ್ವಾಮಿಗಳ ಧ್ಯಾನ ಮಂದಿರದ ಉದ್ಘಾಟನಾ ಸಮಾರಂಭ ಹಾಗೂ 75ರ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಕಲಬುರಗಿ ವಲಯದ ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಾಯಂಕಾಲ 4 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹುಮನಾಬಾದಿಗೆ ಪ್ರಯಾಣಿಸುವರು.

ಫೆಬ್ರವರಿ 1ರಂದು ನೇರ ಫೋನ್-ಇನ್ ಕಾರ್ಯಕ್ರಮ
***************************************************
ಕಲಬುರಗಿ,ಜ.31.(ಕ.ವಾ.)-ಕಲಬುರಗಿಯ ದೂರದರ್ಶನ ಕೇಂದ್ರವು ರೈತ ಬಾಂಧವರಿಗಾಗಿ ಫೆಬ್ರವರಿ 1ರಂದು ಸಾಯಂಕಾಲ 5.30 ರಿಂದ 6 ಗಂಟೆಯವರೆಗೆ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಮುಖ್ಯಸ್ಥ ಡಾ. ರವೀಂದ್ರ ಮೂಲಗೆ ಮತ್ತು ವಿಷಯ ತಜ್ಞೆ ಶಶಿಕಲಾ ರುಳಿ ಅವರು “ಕಲ್ಲಂಗಡಿ ಹಾಗೂ ಕರಬೂಜ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು” ಕುರಿತು ರೈತರ ಪ್ರಶ್ನೆಗಳಿಗೆ ಉತ್ತರಿಸುವರು. ಪ್ರಕಾಶ ಕೆ. ಮುಜುಮದಾರ ಕಾರ್ಯಕ್ರಮ ಪ್ರಸ್ತುತ ಪಡಿಸುವರು. ರೈತರು ದೂರವಾಣಿ ಸಂಖ್ಯೆ 08472-220491, 220492ಗಳನ್ನು ಸಂಪರ್ಕಿಸಿ ತಮ್ಮ ಪ್ರಶ್ನೆಗಳಿಗೆ ತಜ್ಞರಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

No comments:

Post a Comment