GULBARGA VARTHE

GULBARGA VARTHE

Monday, 6 February 2017

NI 06-02-2017
ಜಮೀನು ಮಾರಾಟ ಅರ್ಜಿಗೆ ಆಕ್ಷೇಪಣೆ ಆಹ್ವಾನ
ಕಲಬುರಗಿ,ಫೆ.06.(ಕ.ವಾ.)-ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕಲಬುರಗಿ ಜಿಲ್ಲೆಯಲ್ಲಿ ಭೂ ಒಡೆತನ ಯೋಜನೆಯ ಅನುಷ್ಠಾನಕ್ಕಾಗಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸುಂಬಡ ಗ್ರಾಮದ ಮಲ್ಲಿಕಾರ್ಜುನ ಶರಣಪ್ಪ ಅವರು ತಮ್ಮ ಒಡೆತನದ ಸರ್ವೇ ನಂ.  220ರಲ್ಲಿರುವ 12 ಎಕರೆ ತರಿ ಜಮೀನನ್ನು ಮಾರಾಟ ಮಾಡಲು ಅರ್ಜಿ ಸಲ್ಲಿಸರುತ್ತಾರೆ.
ಸದರಿ ಭೂ ಮಾಲೀಕರು ಮಾರಾಟ ಮಾಡಲು ಉದ್ದೇಶಿಸಿರುವ ಜಮೀನಿನ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆ/ತಕರಾರುಗಳೇನಾದರೂ ಇದ್ದಲ್ಲಿ 10 ದಿನದೊಳಗಾಗಿ ಕಲಬುರಗಿಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-221331ನ್ನು ಸಂಪರ್ಕಿಸಲು ಕೋರಲಾಗಿದೆÉ. 

ಫೆಬ್ರವರಿ 7ರಿಂದ ಬುದ್ಧ ವಿಹಾರದಲ್ಲಿ
ರಾಜ್ಯ ಮಟ್ಟದ ಜನಪರ ಶಿಲಾ ಶಿಲ್ಪಕಲಾ ಶಿಬಿರ
ಕಲಬುರಗಿ,ಫೆ.06.(ಕ.ವಾ.)-ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಹಾಗೂ ಸಿದ್ಧಾರ್ಥ ವಿಹಾರ ಟ್ರಸ್ಟ್ ಕಲಬುರಗಿ ಇವುಗಳ ಸಹಯೋಗದಲ್ಲಿ ರಾಜ್ಯ ಮಟ್ಟದ ಜನಪರ ಶಿಲಾ ಶಿಲ್ಪಕಲಾ ಶಿಬಿರವನ್ನು ಕಲಬುರಗಿ-ಸೇಡಂ ರಸ್ತೆಯಲ್ಲಿರುವ ಬುದ್ಧ ವಿಹಾರ ಆವರಣದಲ್ಲಿ ಫೆಬ್ರವರಿ 7 ರಿಂದ 26ರವರೆಗೆ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಹಿರಿಯ ಕಲಾವಿದ ಡಾ. ಎ.ಎಸ್.ಪಾಟೀಲ್ ಈ ಶಿಬಿರವನ್ನು ಫೆಬ್ರವರಿ 7 ರಂದು ಬೆಳಗಿನ 11.30 ಗಂಟೆಗೆ ಉದ್ಘಾಟಿಸಲಿದ್ದಾರೆ.
ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗ ಶಿಲ್ಪಿ ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಡಾ. ಮಾರುತಿರಾವ ಡಿ.ಮಾಲೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಭೀಮರಾವ ತೇಗಲತಿಪ್ಪಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ. ಈಶ್ವರ ಇಂಗಿನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಫೆಬ್ರವರಿ 15ರಂದು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ
 ಕಲಬುರಗಿ,ಫೆ.06.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯ ನಾಲ್ಕನೇ ಸಾಮಾನ್ಯ ಸಭೆಯು ಫೆಬ್ರವರಿ 15ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಜರುಗಲಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸದರಿ ಸಾಮಾನ್ಯ ಸಭೆಗೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಎಲ್ಲ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ. ಸೂಚಿಸಿದ್ದಾರೆ.

ಅಫಜಲಪುರ ಪಟ್ಟಣದ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ
ಕಲಬುರಗಿ,ಫೆ.06.(ಕ.ವಾ.)-ಅಫಜಲಪುರ ಪುರಸಭೆ ವ್ಯಾಪ್ತಿಯ ಕೃಷಿಯೇತರ ಜಮೀನು ಸರ್ವೇ ನಂ. 372/7, 371/3, 372/8, 372/6 ಮತ್ತು 271/2ರಲ್ಲಿ ಸಾರ್ವಜನಿಕರÀ ಉಪಯೋಗಕ್ಕಾಗಿ ಕಾಯ್ದಿರಿಸಿದ ಸಿ.ಎ.ನಿವೇಶನಗಳÀನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ವಸತಿ ನಿಲಯ ಮತ್ತು ಸಮುದಾಯ ಭವನ ನಿರ್ಮಾಣ ಮಾಡಲು ಹಂಚಿಕೆ ಮಾಡಲಾಗುತ್ತಿದೆ. ಸದರಿ ನಿವೇಶನಗಳ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆ/ತಕರಾರು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ 2017ರ ಫೆಬ್ರವರಿ 10ರೊಳಗಾಗಿ ಅಫಜಲಪುರ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಪುರಸಭೆಯ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ಕೋರಿದ್ದಾರೆ. 
                            ********

No comments:

Post a Comment