GULBARGA VARTHE

GULBARGA VARTHE

Tuesday, 19 December 2017

NEWS AND PHOTO DATE; 19--12--2017

ರಾಜ್ಯದ 12 ಕಡೆ ವೇ ಸೈಡ್ ಎಮಿನಿಟೀಸ್ ಕೇಂದ್ರ ಸ್ಥಾಪನೆ
****************************************************
ಕಲಬುರಗಿ,ಡಿ.19.(ಕ.ವಾ.)-ರಸ್ತೆ ಪ್ರಯಾಣ ಕೈಗೊಳ್ಳುವ ಪ್ರವಾಸಿಗರಿಗೆ ಅನೂಕೂಲವಾಗಲೆಂದು ಚಿತ್ತಾಪುರ ತಾಲೂಕಿನ ಮಾಡಬೂಳ ಹೆದ್ದಾರಿ ಸೇರಿದಂತೆ ರಾಜ್ಯದ 12 ಕಡೆ ಹೆದ್ದಾರಿ ಬಳಿ ಸೌಲಭ್ಯ (ವೇ ಸೈಡ್ ಎಮಿನಿಟೀಸ್) ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.
ಅವರು ಮಂಗಳವಾರ ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತ ಕನಿಷ್ಠ ಎರಡೂವರೆ ಎಕರೆ ಜಮೀನಿನಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆಯಾಗುವ ಈ ಕೇಂದ್ರದಲ್ಲಿ ಪ್ರವಾಸಿಗರಿಗೆ ಲಘು ಉಪಹಾರ, ಕುಡಿಯುವ ನೀರು, ಶೌಚಾಲಯ, ಪ್ರಥಮ ಚಿಕಿತ್ಸೆಯದಂತಹ ಸೌಲಭ್ಯ ದೊರೆಯಲಿದೆ. ಸರ್ಕಾರವೆ ಕೇಂದ್ರ ಸ್ಥಾಪನೆ ಮಾಡುತ್ತಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಇದರ ನಿರ್ವಹಣೆ ಮಾಡಲಾಗುವುದು. ಚಿತ್ತಾಪುರ, ಚಿತ್ರದುರ್ಗ, ಹಾಸನ, ಮೈಸೂರು, ಕಾರವಾರ, ವಿಜಯಪುರ, ತುಮಕೂರು ಸೇರಿದಂತೆ 12 ಕಡೆ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಈ ಪೈಕಿ 8 ಕೇಂದ್ರಕ್ಕೆ ಈಗಾಗಲೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಚಿತ್ತಾಪುರ ತಾಲೂಕಿನ ಮಾಡಬೂಳ ಬಳಿ ಮತ್ತು ಚಿತ್ರದುರ್ಗದಲ್ಲಿ ಪ್ರಾಯೋಗಿಕವಾಗಿ 2018ರ ಜನವರಿ 26ರೊಳಗೆ ಕೇಂದ್ರ ಆರಂಭಿಸಲಾಗುತ್ತಿದ್ದು, ತದನಂತರ ಉಳಿದ ಕಡೆ ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಪರಿಸರ ಚಾರಣ ಕೈಗೊಳ್ಳುವ ಪ್ರವಾಸಿಗರು ಅಂತರ್ಜಾಲದ ಮಾಹಿತಿಯನ್ನಾಧರಿಸಿ ಸೂಕ್ತ ವ್ಯವಸ್ಥೆಯಿಲ್ಲದ ಮತ್ತು ಅಪಾಯಕಾರಿ ಟ್ರೆಕ್ಕಿಂಗ್ ಸ್ಥಳಗಳಲ್ಲಿ ಟ್ರೆಕ್ಕಿಂಗ್ ಮಾಡಿ ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದು, ಇದನ್ನು ತಪ್ಪಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ 11 ಸ್ಥಳಗಳನ್ನು ಅಧಿಕೃತ ಪರಿಸರ ಚಾರಣ ಸ್ಥಳಗಳೆಂದು ಗುರುತಿಸಲಾಗಿದೆ ಎಂದರು.
ಕಲಬುರಗಿ, ಸನ್ನತಿ, ಮಳಖೇಡ್, ಕಾಳಗಿ, ನಾಗಾವಿ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆಯು ಭಾರತೀಯ ಪುರಾತತ್ವ ಇಲಾಖೆ, ಇಂಡಿಯನ್ ಹೆರಿಟೇಜ್ ಕೌನ್ಸಿಲ್ ಮತ್ತು ಇಂಟೆಕ್ ಸಂಸ್ಥೆಯೊಂದಿಗೆ ಸೇರಿ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಅದರಂತೆ ಪ್ರಥಮ ಹಂತವಾಗಿ ಚಿತ್ತಾಪುರ ತಾಲೂಕಿನ ಸನ್ನತಿಯಲ್ಲಿ 1.07 ಕೋಟಿ ರೂ. ಮತ್ತು ನಾಗಾವಿಯಲ್ಲಿ 1.55 ಕೋಟಿ ರೂ. ಮೊತ್ತದಲ್ಲಿ ದೇವಾಲಯಕ್ಕೆ ಸಂಪರ್ಕಿಸುವ ಕಾಲುದಾರಿ, ಬೀದಿ ಬದಿಯಲ್ಲಿ ಬೆಂಚ್ ಸ್ಥಾಪನೆ, ಕುಡಿಯುವ ನೀರು, ಡಸ್ಟ್ ಬಿನ್, ಪಾರ್ಕಿಂಗ್ ವ್ಯವಸ್ಥೆ, ಗಾರ್ಡ್ ರೂಂ ಮತ್ತು ಪ್ರವಾಸಿಗರಿಗೆ ಮಾಹಿತಿ ನೀಡುವ ಕಿಯಾಸ್ಕ್ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಇದಕ್ಕಾಗಿ ಈಗಾಗಲೆ ಅನುದಾನ ಸಹ ಬಿಡುಗಡೆ ಮಾಡಲಾಗಿದೆ ಎಂದರು.
ಕಳೆದ ಒಂದೂವರೆ ವರ್ಷದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿ 44.59 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಪ್ರವಾಸಿ ಸ್ಥಳಗಳಿಗೆ ರಸ್ತೆ ಸಂಪರ್ಕ ಕಾಮಗಾರಿಗೆ 13.5 ಕೋಟಿ ರೂ., 37 ಸ್ಥಳಗಳಲ್ಲಿ ಯಾತ್ರಿ ನಿವಾಸ ಸ್ಥಾಪನೆಗೆ 15 ಕೋಟಿ ರೂ., ಶೌಚಾಲಯ ಮತ್ತು ಕುಡಿಯುವ ನೀರಿಗಾಗಿ 18 ಲಕ್ಷ ರೂ. ಮತ್ತು 8 ಸ್ಥಳಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು 15.67 ಕೋಟಿ ರೂ. ವೆಚ್ಚ ಮಾಡಲಾಗುತಿದ್ದು ಒಟ್ಟಾರೆ 53 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಚಿಂಚೋಳಿ ತಾಲೂಕಿನ ವನ್ಯಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ತಂಗಲು 2 ಕಾಟೇಜ್‍ಗಳನ್ನು ನಿರ್ಮಿಸಲಾಗಿದ್ದು, 15 ದಿನದಲ್ಲಿ ಅರಣ್ಯ ಇಲಾಖೆಗೆ ಹಂಚಿಕೆ ಮಡಲಾಗುವುದÉ್ಚಂದರು
ಕಲಬುರಗಿ ನಗರದ ಸಾರ್ವಜನಿಕ ಉದ್ಯಾನದ ಪ್ರವೇಶದ್ವಾರದಲ್ಲಿ ಅಕ್ರಮ ಕಟ್ಟಡ ತಲೆ ಎತ್ತುತ್ತಿವೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಕುರಿತು ಪರಿಶೀಲಿಸಿ, ಐತಿಹಾಸಿಕ ಪ್ರವೇಶ ದ್ವಾರ ಪುನ: ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಠಪಡಿಸಿದರು.
ಸರ್ಕಾರ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ ತಂತ್ರಜ್ಞಾನ ಸ್ನೇಹಿ ನೀತಿ ಜಾರಿಗೆ ತರಲಾಗಿದ್ದು, 500 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೆ ವೈಫೈ ವ್ಯವಸ್ಥೆ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. 2018ರ ಫೆಬ್ರವರಿಯಲ್ಲಿ 11 ನಗರ ಪ್ರದೇಶಗÀಳಲ್ಲಿ ಉಚಿತ ವೈಫೈ ಸೌಲಭ್ಯಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದಿಯ ಕಾರ್ಯದರ್ಶಿ ಡಾ.ಉಮೇಶ ಜಾಧವ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಆಲಂ ಖಾನ್, ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಜಗದೇವ ಗುತ್ತೇದಾರ ಇದ್ದರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
********************************************
ಕಲಬುರಗಿ,ಡಿ.19.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಡಿಸೆಂಬರ್ 20ರಂದು ಬೆಳಿಗ್ಗೆ 5.39 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಡಿಸೆಂಬರ್ 20 ರಿಂದ 22ರವರೆಗೆ ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಡಿಸೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಗೂ ಬೆಳಿಗ್ಗೆ 10.45 ಗಂಟೆಗೆ ರಾಜೀವ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಡಿಸೆಂಬರ್ 24ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಡಿಸೆಂಬರ್ 25ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಡಿಸೆಂಬರ್ 20ರಂದು ಕಾನೂನು ಅರಿವು ನೆರವು ಕಾರ್ಯಕ್ರಮ
*****************************************************
ಕಲಬುರಗಿ,ಡಿ.19.(ಕ.ವಾ.)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ಮಾಹಿತಿ ಹಕ್ಕು ಕಾರ್ಯಕರ್ತರ ಸಂಘ ಕಲಬುರಗಿ ಹಾಗೂ ಮಾನವ ಹಕ್ಕುಗಳ ಹಿತರಕ್ಷಣಾ ವೇದಿಕೆ ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ” ಅಂಗವಾಗಿ ಮಾನವ ಹಕ್ಕುಗಳ ಮತ್ತು ಪೊಲೀಸ್ ದೂರು ಪ್ರಾಧಿಕಾರದ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಡಿಸೆಂಬರ್ 20ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ ಕಾರ್ಯಕ್ರಮ ಉದ್ಘಾಟಿಸುವರು. ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಸವರಾಜ ಗಾಣೂರೆ ಅಧ್ಯಕ್ಷತೆ ವಹಿಸುವರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಭೀಮರಾವ ತಳವಾರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಕಲಬುರಗಿ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಮಾನವ ಹಕ್ಕುಗಳು ಹಾಗೂ ಪೊಲೀಸ್ ದೂರು ಪ್ರಾಧಿಕಾರ ಕುರಿತು ಮಾತನಾಡುವರು.
ಪ್ರವಾಸೋದ್ಯಮ ಸಚಿವರ ಪ್ರವಾಸ
*******************************
ಕಲಬುರಗಿ,ಡಿ.19.(ಕ.ವಾ.)-ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವÀ ಪ್ರಿಯಾಂಕ ಖರ್ಗೆ ಅವರು ಡಿಸೆಂಬರ್ 20ರಂದು ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ಕಲಬುರಗಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.
ಲೋಕಸಭಾ ಸದಸ್ಯರ ಪ್ರವಾಸ
***************************
ಕಲಬುರಗಿ,ಡಿ.19.(ಕ.ವಾ.)-ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಹೈದ್ರಾಬಾದಿನಿಂದ ರಸ್ತೆ ಮೂಲಕ ಡಿಸೆಂಬರ್ 22ರಂದು ರಾತ್ರಿ 9 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಡಿಸೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ನೂತನವಾಗಿ ನಿರ್ಮಿಸಲಾದ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡವನ್ನು ಉದ್ಘಾಟಿಸುವರು. ಬೆಳಿಗ್ಗೆ 10.30 ಗಂಟೆಗೆ ಜಗತ್ ವೃತ್ತದಿಂದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದ ವರೆಗಿನ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಬೆಳಿಗ್ಗೆ 11.30 ಗಂಟೆಗೆ ರಾಜೀವ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಡಿಸೆಂಬರ್ 24ರಂದು ಬೆಳಿಗ್ಗೆ 11 ಗಂಟೆಗೆ ಕಮಲಾಪುರದಲ್ಲಿ ಕಲ್ಯಾಣ ಮಂಟಪ ಉದ್ಘಾಟಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಡಿಸೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಜೇವರ್ಗಿಯಲ್ಲಿ ದಿ. ಧರ್ಮಸಿಂಗ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.
ಡಿಸೆಂಬರ್ 20ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*************************************************
ಕಲಬುರಗಿ,ನ.19.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರಿಂದ ಡಿಸೆಂಬರ್ 20ರಂದು 110ಕೆ.ವಿ. ಮರಗುತ್ತಿ ಉಪ ವಿತರಣಾ ಕೇಂದ್ರದಲ್ಲಿ ಸುಧಾರಣಾ ಕಾರ್ಯಕೈಗೊಂಡಿರುವ ಪ್ರಯುಕ್ತ ಸದರಿ ಫೀಡರ ವ್ಯಾಪ್ತಿಯಲ್ಲಿ ಬರುವ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಗ್ರಾಮಗಳ ವಿವರ ಇಂತಿದೆ. ಸೊಂತ, ರಾಜನಾಳ, ಡೊಂಗರಗಾಂವ, ಕಲಮುಡ, ಎನ್.ಜೆ.ವಾಯ್., ಪಟವಾಡ ಎನ್‍ಜೆವಾಯ್ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
No comments:

Post a Comment