GULBARGA VARTHE

GULBARGA VARTHE

Saturday, 6 January 2018

NEWS AND PHOTO DATE; 06--01--2018

ಯುವ ಮತದಾರರ ನೋಂದಣಿಗೆ ಅಭಿಯಾನ ಹಮ್ಮಿಕೊಳ್ಳಲು ಸೂಚನೆ
ಕಲಬುರಗಿ,ಜ.06.(ಕ.ವಾ.)-ಜಿಲ್ಲೆಯಲ್ಲಿರುವ ಯುವ ಮತದಾರರ ನೋಂದಣಿಗಾಗಿ ಬೂತ ಮಟ್ಟದ ಅಧಿಕಾರಿಗಳು ನಾಳೆಯಿಂದ ಅಭಿಯಾನ ಹಮ್ಮಿಕೊಂಡು ಮೂರು ದಿನದೊಳಗಾಗಿ ಕಡ್ಡಾಯವಾಗಿ ಶೇ. 100ರಷ್ಟು ನೋಂದಣಿ ಮಾಡಿಸಲು ಜವಾಬ್ದಾರಿ ವಹಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶನಿವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ನೋಂದಣಿ ಮತ್ತು ಚುನಾವಣೆ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿ, ಬೂತ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಯುವ ಮತದಾರರಿಗೆ ಫಾರಂ ನಂ. 6ನ್ನು ನೀಡಿ ಅಥವಾ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಸಬೇಕೆಂದು ತಿಳಿಸಿದರು.
ಜಿಲ್ಲೆಯ ಎಲ್ಲ ಪಿಯು ಮತ್ತು ಡಿಗ್ರಿ ಕಾಲೇಜುಗಳ ಮುಖ್ಯಸ್ಥರ ಸಭೆ ಕರೆದು ಕಾಲೇಜುಗಳಿಗೆ ಆಗಮಿಸುವ ಯುವಕರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಕುರಿತು ಮಾಹಿತಿ ಪಡೆಯಬೇಕು. 2000 ಜನವರಿ 1ರೊಳಗಾಗಿ ಜನಿಸಿದ ಯುವಕರನ್ನು ಮಿಲೆನಿಯಂ ಮತದಾರರೆಂದು ನೋಂದಣಿ ಮಾಡಿಕೊಳ್ಳಲಾಗುವುದು. ಜನವರಿ 8ರಿಂದ ಮತದಾರರ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದ್ದು, ಬೂತ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಪರಿಷ್ಕರಣೆ ಮಾಡಬೇಕು ಹಾಗೂ ಮತದಾರರ ಮೊಬೈಲ್ ಸಂಖ್ಯೆಗಳನ್ನು ಸಂಗ್ರಹಿಸಬೇಕು ಅಲ್ಲದೇ ಮಾಹಿತಿ ಸಂಗ್ರಹಿಸಬೇಕೆಂದು ತಿಳಿಸಿದರು.
ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಪ್ರತಿಯೊಂದು ಮತಕ್ಷೇತ್ರದ ಕೇಂದ್ರ ಪ್ರದೇಶದಲ್ಲಿ ಚುನಾವಣಾ ಕೋಶ ಸ್ಥಾಪಿಸಿ ಸಾರ್ವಜನಿಕರು ಮತದಾರರ ನೋಂದಣಿ ಮತ್ತು ದೂರುಗಳನ್ನು ದಾಖಲಿಸಲು ಅನುಕೂಲವಾಗುವ ಹಾಗೆ ದೂರವಾಣಿ ಸಂಖ್ಯೆಗಳನ್ನು ನೀಡಬೇಕು. ಚುನಾವಣಾಧಿಕಾರಿ ಮತ್ತು ತಹಶೀಲ್ದಾರರು ತಮ್ಮ ಮತಕ್ಷೇತ್ರ ಮತ್ತು ತಾಲೂಕಿನಲ್ಲಿ ಈ ಹಿಂದೆ ನಾಲ್ಕು ವರ್ಷಗಳಲ್ಲಿ ನಡೆದಿರುವ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಅಹಿತಕರ ಘಟನೆಗಳ ಬಗ್ಗೆ ವರದಿ ನೀಡಬೇಕು. ತಹಶೀಲ್ದಾರರು ಪ್ರತಿ ವಾರ ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ನಡೆಯುವ ಸಣ್ಣ ಅಹಿತಕರ ಘಟನೆ ವರದಿ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ತಾಲೂಕು ಮಟ್ಟದಲ್ಲಿ ಸಭೆ ಕರೆದು ಮತದಾರರ ನೋಂದಣಿ ಮತ್ತು ಚುನಾವಣೆ ಬಗ್ಗೆ ಜಾಗೃತಿ ಮೂಡಿಸಬೇಕು. ಈ ವರ್ಷ ಪ್ರಥಮ ಬಾರಿಗೆ ಮತದಾನ ಮಾಡಿದ್ದನ್ನು ಖಚಿತಪಡಿಸಿಕೊಳ್ಳಲು ನೂತನ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸಬೇಕು. ಜನವರಿ 25ರಂದು ಹಮ್ಮಿಕೊಳ್ಳಲಾಗುವ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಮತಗಟ್ಟೆ ಮಟ್ಟದಲ್ಲಿಯೂ ಆಚರಿಸಬೇಕೆಂದರು.
ಜಿಲ್ಲೆಯಾದ್ಯಂತ ಮತದಾರರ ಪರಿಷ್ಕರಣೆ ಕಾರ್ಯ ಮುಕ್ತಾಯಗೊಳ್ಳುವವರೆಗೆ ಚುನಾವಣಾಧಿಕಾರಿಗಳಿಗೆ ರಜೆ ಮಂಜೂರು ಮಾಡಲಾಗುವುದಿಲ್ಲ. ಹಾಗೂ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ತಹಶೀಲ್ದಾರರು ಕಡ್ಡಾಯವಾಗಿ ತಾಲೂಕಾ ಕೇಂದ್ರಗಳಲ್ಲಿ ತಮ್ಮ ವಸತಿ ಗೃಹಗಳಲ್ಲಿ ವಾಸವಾಗುವಂತೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕಲಬುರಗಿ ಸಹಾಯಕ ಆಯುಕ್ತೆ ಸುಶೀಲಾ ಬಿ., ಸೇಡಂ ಸಹಾಯಕ ಆಯುಕ್ತ ರಾಚಪ್ಪ, ಎಲ್ಲ ತಾಲೂಕುಗಳ ತಹಶೀಲ್ದಾರರು ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.    
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
ಕಲಬುರಗಿ,ಜ.06.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ ಅವರು  ಯಶವಂತಪುರ-ಸೋಲಾಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜನವರಿ 7ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು. 
 ಜನವರಿ 7 ಹಾಗೂ 8ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಜನವರಿ 9ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಚಿವರು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಪೊಲೀಸ್ ಕಾನ್ಸ್‍ಸ್ಟೇಬಲ್ ನೇಮಕಾತಿ: ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ
ಕಲಬುರಗಿ,ಜ.06.(ಕ.ವಾ.)-ಕೆ.ಎಸ್.ಐ.ಎಸ್.ಎಫ್. ಘಟಕದ ಪೊಲೀಸ್ ಕಾನ್ಸ್‍ಸ್ಟೇಬಲ್ ಮತ್ತು ಕೆ.ಎಸ್.ಆರ್.ಪಿ. ಘಟಕದ ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಸ್ಟೇಬಲ್‍ಗಳ ಕ್ರಮವಾಗಿ 395 ಮತ್ತು 549 ಹುದ್ದೆಗಳ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.) ಯನ್ನು ಜನವರಿ 10 ರಿಂದ 13ರವರೆಗೆ ಕಲಬುರಗಿ ಜಿಲ್ಲಾ ಸಶಸ್ತ್ರ ಪೊಲೀಸ್ ಮೈದಾನದಲ್ಲಿ ನಡೆಯಲಿದೆ ಎಂದು ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಎಸ್. ಮುರುಗನ್ ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಈಗಾಗಲೇ ಸಂದೇಶವನ್ನು ರವಾನಿಸಲಾಗಿದೆ. ಆದ್ದರಿಂದ ಅಭ್ಯರ್ಥಿಗಳು ತಮಗೆ ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.) ಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ. 
ರಂಗಾಯಣದಿಂದ ಓರ್ವ ನಟ-ನಟಿಯರ ಆಯ್ಕೆಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಜ.06.(ಕ.ವಾ.)-ಕಲಬುರಗಿ ರಂಗಾಯಣದಿಂದ ತಾತ್ಕಾಲಿಕವಾಗಿ 3 ವರ್ಷಗಳ ಅವಧಿಗೆ ಓರ್ವ ನಟ-ನಟಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ನಟ-ನಟಿಯರ ಆಯ್ಕೆಯ ಬಳಿಕ ರೆಪರ್ಟರಿ ಪ್ರಾರಂಭಿಸಲಾಗುತ್ತಿದೆ ಎಂದು ರಂಗಾಯಣ ನಿರ್ದೇಶಕ ಮಹೇಶ ವಿ. ಪಾಟೀಲ ತಿಳಿಸಿದ್ದಾರೆ.
ಈ ನೇಮಕಗಳಲ್ಲಿ ಕನಿಷ್ಠ ಶೇ.50ರಷ್ಟು ಹುದ್ದೆಗಳನ್ನು ಪ್ರಾದೇಶಿಕ ವಲಯದ ಕಲಾವಿದರಿಗೆ ಮೀಸಲಿಟ್ಟಿದ್ದು, ರಂಗ ಪರಿಣತಿಯೇ ಪ್ರಥಮ ಅರ್ಹತೆ ಹಾಗೂ ರಂಗ ಶಿಕ್ಷಣದ ಅರ್ಹತೆಗಳು ಅಪೇಕ್ಷಣೀಯ ಹೊರತು ಕಡ್ಡಾಯವಲ್ಲ. ರಂಗಪ್ರಯೋಗಗಳಲ್ಲಿ ಭಾಗವಹಿಸುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಗೊಂಡ ಕಲಾವಿದರು ರೆಪರ್ಟಿಯ ಭಾಗವಾಗಿದ್ದು, ರಂಗ ಶಿಕ್ಷಣದ ಎಲ್ಲಾ ವಿಭಾಗಗಳಲ್ಲಿ ತರಬೇತಿ ಪಡೆಯುವುದರ ಜೊತೆಗೆ ಅಭಿನಯದ ಜವಾಬ್ದಾರಿಯನ್ನು ನಿಭಾಯಿಸಬೇಕು. ನಟ-ನಟಿಯರ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು.
ಆಯ್ಕೆಯಾದ ಕಲಾವಿದರಿಗೆ ಮೊದಲ ವರ್ಷದಲ್ಲಿ ಸಂಚಿತ ವೇತನ ಮಾಸಿಕ 12,000 ರೂ., ಎರಡನೇ ವರ್ಷದಲ್ಲಿ ಮಾಸಿಕ 14,000 ರೂ. ಹಾಗೂ ಮೂರನೇ ವರ್ಷ ಮಾಸಿಕ 16,000 ರೂ. ಗಳನ್ನು ಕ್ರೋಢೀಕೃತ ಸಂಬಳವಾಗಿ ನೀಡಲಾಗುವುದು. ಇತರೆ ಯಾವುದೇ ಭತ್ಯೆಗಳನ್ನು ನೀಡುವುದಿಲ್ಲ. ಪಾರಂಪರಿಕ ಕಲೆಯ ಕುಟುಂಬಗಳಿಂದ ಬಂದ ಹಾಗೂ ರಂಗ ಶಿಕ್ಷಣದ ಪದವಿ ಪಡೆದು ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಇಂತಹ ಪ್ರಕರಣದಲ್ಲಿ ವಯೋಮಿತಿಯನ್ನು 5 ವರ್ಷ ಸಡಿಲಿಸಬಹುದು. ಕಲಾವಿದರ ಆಯ್ಕೆಯನ್ನು ಪಾರದರ್ಶಕವಾಗಿ ರಂಗ ಸಮಾಜವು ಆಯಾ ರಂಗಾಯಣಗಳ ಅಧ್ಯಕ್ಷತೆಯಲ್ಲಿ ರಚಿಸುವ ಉಪ ಸಮಿತಿಯು ಮಾಡುತ್ತದೆ.
ಆಸಕ್ತ ಕಲಾವಿದರು ಬಿಳಿ ಹಾಳೆಯ ಮೇಲೆ ಸಂಪೂರ್ಣ ಸ್ವವಿವರದೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಜನವರಿ 12ರ ಸಂಜೆ 5 ಗಂಟೆಯೊಳಗಾಗಿ ಇ-ಮೇಲ್ ವಿಳಾಸ ಡಿಚಿಟಿgಚಿಥಿಚಿಟಿಚಿಞಚಿಟಚಿbuಡಿgi@gmಚಿiಟ.ಛಿom ಅಥವಾ ಅಂಚೆ ಮೂಲಕ, ಖುದ್ದಾಗಿ ಅರ್ಜಿಯನ್ನು ಆಡಳಿತಾಧಿಕಾರಿಗಳು, ರಂಗಾಯಣ, ಡಾ. ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕøತಿಕ ಸಮುಚ್ಚಯ ಸೇಡಂ-ಶಹಾಬಾದ ವರ್ತುಲ ಕಲಬುರಗಿ-585105 ವಿಳಾಸಕ್ಕೆ ಸಲ್ಲಿಸುವುದು. ರಂಗಾಯಣ ಕಚೇರಿಗೆ ವಾರದ ರಜೆಯು ಸೋಮವಾರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08472-227735ನ್ನು ಸಂಪರ್ಕಿಸಲು ಕೋರಿದೆ.

ಕಿತ್ತೂರ ರಾಣಿ ಚೆನ್ನಮ್ಮ-ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ,ಜ.06.(ಕ.ವಾ.)-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನೀಡುವ 2017-18ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಳಿಗಾಗಿ ಕಲಬುರಗಿ ಜಿಲ್ಲೆಯ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ ಹಾಗೂ ಅರ್ಹ ವ್ಯಕ್ತಿಗಳಿಗೆ ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುವುದು. ಇದಲ್ಲದೇ ಸರ್ಕಾರದ ಆದೇಶದಂತೆ ಈ ವಿವಿಧ ಕ್ಷೇತ್ರಗಳಲ್ಲದೇ, ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಗೆ ವೀರ ಮಹಿಳೆ ಪ್ರಶಸ್ತಿಯನ್ನು ಸಹ  ನೀಡಲಾಗುತ್ತಿದೆ.
ಪ್ರಚಲಿತ ವಿದ್ಯಮಾನಗಳಿಂದ ಮಹಿಳಾ ಕ್ಷೇತ್ರದಲ್ಲಿ ಗುರುತಿಸಿಕೊಂಡಂತಹ ಹಾಗೂ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡಂತಹ ಮತ್ತು ಕಳೆದ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ  ಸೇವೆ  ಸಲ್ಲಿಸುತ್ತಿರಬೇಕು. 
ಪ್ರಶಸ್ತಿಗಾಗಿ ಅರ್ಹ ಮಹಿಳೆಯರು ನಿಗದಿತ ನಮೂನೆಗಳನ್ನು ಕಲಬುರಗಿ ಚಂದ್ರಶೇಖರ ಪಾಟೀಲ್ ಕ್ರ್ರೀಡಾಂಗಣ ಎದುರುಗಡೆಯಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಸದರಿ ಕಚೇರಿಗೆ ಜನವರಿ 17ರ ಸಾಯಂಕಾಲ 4 ಗಂಟೆಯೊಳಗಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ. 
ಜನವರಿ 8ರಿಂದ ಕಾಲುವೆಗೆ ನೀರು ಬಿಡುಗಡೆ
ಕಲಬುರಗಿ,ಜ.06.(ಕ.ವಾ.)-ಅಚ್ಟುಕಟ್ಟು ಪ್ರದೇಶದಲ್ಲಿ ರೈತರ ಬೇಡಿಕೆಯಿರುವುದರಿಂದ 2018ರ ಜನವರಿ 8ರಿಂದ ಕೆಳದಂಡೆ ಮುಲ್ಲಾಮಾರಿ ಯೋಜನೆಯ ಕಾಲುವೆಯಲ್ಲಿ ನೀರು ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐ.ಪಿ.ಸಿ ವಿಭಾಗ-1ರ  ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಈ ಹಿಂದೆ ಹಿಂಗಾರು ಹಂಗಾಮಿಗೆ ರೈತರ ಬೇಡಿಕೆಯಂತೆ 2017ರ ನವೆಂಬರ್ 14 ರಿಂದ ಡಿಸೆಂಬರ್ 20ರವರೆಗೆ ಮುಖ್ಯ ಕಾಲುವೆಗೆ ನೀರನ್ನು ಬಿಡಲಾಗಿತ್ತು. ನಂತರ ರೈತರ ಬೇಡಿಕೆ ಇಲ್ಲದ್ದನ್ನು ಗಮನಿಸಿ ನೀರಾವರಿ ಸಲಹಾ ಸಮಿತಿಯ ನಿರ್ಣಯದಂತೆ 2017ರ ಡಿಸೆಂಬರ್ 21 ರಿಂದ ಕಾಲುವೆಯಲ್ಲಿ ನೀರನ್ನು ಹರಿಸಿರುವುದನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 7 ಹಾಗೂ 8ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ಜ.06.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ಜನವರಿ 7ರಂದು ಕಲಬುರಗಿ ನಗರದ 11ಕೆ.ವಿ. ಸಿನಿಮಾ, ರಾಘವೇಂದ್ರ ಕಾಲೋನಿ, ವಿಠ್ಠಲನಗರ ಫೀಡರ ವ್ಯಾಪ್ತಿಗಳಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹಾಗೂ 11ಕೆ.ವಿ. ಸಿದ್ದೇಶ್ವರ ಫೀಡರ ವ್ಯಾಪ್ತಿಯಲ್ಲಿ ಸಿದ್ದೇಶ್ವರ ಫೀಡರಿನ ಕೇಬಲ ಕಾರ್ಯಕೈಗೊಳ್ಳುವ ಪ್ರಯುಕ್ತ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ಜನವರಿ 8ರಂದು 11ಕೆ.ವಿ. ಸಪ್ನಾ ಬೇಕರಿ ಫೀಡರ ವ್ಯಾಪ್ತಿಯಲ್ಲಿ  ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ. ವಿದ್ಯುತ್ ವ್ಯತ್ಯಯ ಉಂಟಾಗುವ ಫೀಡರ್ ವ್ಯಾಪ್ತಿಯ ಪ್ರದೇಶಗಳ ವಿವರ ಇಂತಿದೆ.
11ಕೆ.ವಿ. ಸಿನಿಮಾ ಫೀಡರ್: ಶಹಾ ಬಜಾರ್ ಜಿ.ಡಿ.ಎ., ಐಯ್ಯರವಾಡಿ, ಲೋಹಾರಗಲ್ಲಿ, ಫಿಲ್ಟರ್ ಬೆಡ್, ಆಶ್ರಯ ಕಾಲೋನಿ, ಬಂಬೂ ಬಜಾರ್, ಸರಸ್ವತಿ ಗೋದಾಮ, ವೆಜಿಟೆಬಲ್ ಮಾರ್ಕೇಟ್, ಸಿಟಿಬಸ್ ನಿಲ್ದಾಣ, ಶಹಾ ಬಜಾರ್, ಕಟಗರಪುರ, ಫೋರ್ಟ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.11ಕೆ.ವಿ ರಾಘವೇಂದ್ರ ಕಾಲೋನಿ ಫೀಡರ್: ಪಿ.ಎಲ್.ಡಿ ಬ್ಯಾಂಕ್, ಗೂಲ್ಲರಗಲ್ಲಿ, ಜಗತ್, ಜಗತ್ ಅಪ್ಪರ್À ಮತ್ತು ಲೋವರ್ ಲೆನ್, ಮಹಾನಗರಪಾಲಿಕೆ ಆಯುಕ್ತರವರ ಗೃಹ, ತಿರಂದಾಜ್ ಟಾಕೀಸ್ ಎದುರುಗಡೆ, ಮೈಲಾರಲಿಂಗ ದೇವಸ್ಥಾನ,  ಆದಿತ್ಯಾ ಹೋಟೆಲ್, ಎಸ್.ಪಿ. ಕಚೇರಿ ಪ್ರದೇಶ, ಏಷಿಯನ್ ಮಾಲ್, ಆಮಂತ್ರಣ ಹೋಟೆಲ್, ಕಕ್ಕೇರಿ ಕಾಂಪ್ಲೆಕ್ಸ್,   ಪಶುವೈದ್ಯಕೀಯ ಆಸ್ಪತ್ರೆ, ಟ್ರೈನಿಂಗ್ ಸೆಂಟರ್, ಶಹಾ ಹುಸೇನ್ ಛಿಲ್ಲಾ, ಸಮತಾ ಕಾಲೋನಿ, ಕೋರಿಮಠ, ಧನಗರ ಗಲ್ಲಿ ಗಂಗಾ ನಗರ, ಅಶೋಕ್ ನಗರ , ಹಳೇ ರಾಘವೇಂದ್ರ ಕಾಲೋನಿ  ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ ವಿಠ್ಠಲನಗರ ಫೀಡರ್: ಡಿ.ಡಿ.ಪಿ.ಐ. ಕಚೇರಿ, ವಿಜಯ ವಿದ್ಯಾಲಯ ಕಂಪೌಂಡ್, ಐ-ವಾನ್-ಶಾಹಿ ಅಥಿತಿಗೃಹ, ಗುಲ್ಲಾಬೌಡಿ, ಲಾಹೋಟಿ ಪೆಟ್ರೋಲ್‍ಪಂಪ್, ಕೆ.ಬಿ.ಎನ್.ಆಸ್ಪತ್ರೆ, ಖೂಬಾ ಪ್ಲಾಟ್, ವಿಠ್ಠಲನಗರ, ಆನಂದನಗರ, ವಿವೇಕಾನಂದ ನಗರ, ರಾಮನಗರ, ಇಂದಿರಾನಗರ, ವಿದ್ಯಾನಗರ, ಬಲಘಟ ಕಂಪೌಂಡ್, ಮೇಹತಾ ಕಂಪೌಂಡ್, ಮಿನಿ ವಿಧಾನಾಸೌಧ, ಜಿಲ್ಲಾ ನ್ಯಾಯಲಯ ಮತ್ತು ಜೆಸ್ಕಾಂ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
       11 ಕೆ.ವಿ ಸಿದ್ದೇಶ್ವರ ಫೀಡರ್: ಪ್ರಗತಿ ಕಾಲೋನಿ, ,ಬಡೇಪೂರ, ಎಂ.ಜಿ ರೋಡ್, ಆರ್.ಟಿ.ಓ. ಕಚೇರಿ, ಜೆ.ಡಿ.ಎ. ಸಂತ್ರಾಸವಾಡಿ, ದರ್ಶನಾಪೂರ ಲೇಔಟ್, ಎಂ.ಆರ್.ಎಂ.ಸಿ. ಕಾಲೇಜ್ ಎದುರುಗಡೆ, ಭರತ ನಗರ ತಾಂಡಾ, ದರ್ಶನ ಆಪಾರ್ಟ್‍ಮೆಂಟ್,  ಬಸವೇಶ್ವರ ಆಸ್ಪತ್ರೆ  ಮತ್ತು ಸುತ್ತಮುತ್ತಲಿನ ಪ್ರದೇಶಗಳು.
      11ಕೆ.ವಿ ಸಪ್ನಾ ಬೇಕರಿ ಫೀಡರ್: ಜಂಜಂ ಕಾಲೋನಿ, ಸಿಟಿ ಸ್ಕೂಲ್ ಏರಿಯಾ, ತಬೇಲಾ, ಮಡ್ ಏರಿಯಾ, ಸೋನಿಯಾ ಗಾಂಧಿ ಕಾಲೋನಿ, ಅಮಾನ್ ನಗರ, ಇತಿಹಾದ್ ಕಾಲೋನಿ, ರೆಹಮತ್ ನಗರ , ಗುಲ್ಶನ್ ಅರಾಫತ್ ಕಾಲೋನಿ, ಅಬುಬಕ್ಕರ ಕಾಲೋನಿ, ಸಹಾರಾ ಸ್ಕೂಲ್ ಕಾಲೋನಿ, ಗರಿಬ್ ನವಾಜ್ ಕಾಲೋನಿ , ನವಾಬ  ಮೊಹಲ್ಲಾ, ಎಂ.ಕೆ. ನಗರ , ಆರೀಫ ಖಾನ್ ಲೇಔಟ್, ಸುಗಂಧಿ ಲೇಔಟ್, ಹಾಗರಗಾ ಕ್ರಾಸ್ ಏರಿಯಾ, ಸಪ್ನಾ ಬೇಕರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

No comments:

Post a Comment