GULBARGA VARTHE

GULBARGA VARTHE

Monday, 15 January 2018

NEWS AND PHOTO DATE: 15--1--2018

ಭೋವಿ ಸಮಾಜ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ದೊರಕಿಸಲು ಪ್ರಯತ್ನ
**********************************************************************
ಕಲಬುರಗಿ,ಜ.15.(ಕ.ವಾ.)-ಸರ್ಕಾರವು ಭೋವಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಇದಕ್ಕೆ ಹೆಚ್ಚಿನ ಅನುದಾನ ನೀಡಿ ಸಮಾಜ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಡಾ|| ಶರಣಪ್ರಕಾಶ ಪಾಟೀಲ ತಿಳಿಸಿದರು.
ಅವರು ಸೋಮವಾರ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಜೀವನವೇ ಅವರ ಸಂದೇಶ ಎನ್ನುವ ರೀತಿಯಲ್ಲಿ ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡಿದವರ ಜನ್ಮ ದಿನಾಚರಣೆಯನ್ನು ಸರ್ಕಾರ ಆಚರಿಸುತ್ತಿದೆ. ಕುಲಕ್ಕೊಬ್ಬ ಶರಣನ್ನು ಗುರುತಿಸಿ ಎಲ್ಲ ಸಮಾದವರಲ್ಲಿ ಸ್ವಾಭಿಮಾನ ತುಂಬಿ ಗೌರವಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಹನ್ನೇರಡನೇ ಶತಮಾನದ ಕ್ರಾಂತಿ ಸಕಲ ಜೀವಾತ್ಮಗಳಿಗೆ ಲೇಸು ಬಯಸಿದ್ದು, ಇಡೀ ಸಮಾಜವನ್ನು ಪರಿವರ್ತಿಸುವಲ್ಲಿ ತೊಡಗಿತ್ತು ಎಂದರು.
ಶಿವಯೋಗಿ ಸಿದ್ದರಾಮೇಶ್ವರರು ಕಾಯಕಯೋಗಿಯಾಗಿ ನಿಸ್ವಾರ್ಥಿಗಳಾಗಿದ್ದರು. ಆದ್ದರಿಂದಲೇ ಅನುಭವ ಮಂಟಪದಲ್ಲಿ ಚನ್ನಬಸವಣ್ಣನವರು ಉನ್ನತ ಸ್ಥಾನವನ್ನು ನೀಡಿದ್ದರು. ಹನ್ನೇರಡನೇ ಶತಮಾನದ ಬಸವಾದಿ ಶರಣರು ನುಡಿದಂತೆ ನಡೆದುಕೊಂಡಿದ್ದಾರೆ. ಇಂದು ಸ್ವಾರ್ಥ ಮರೆಯಲಿಕ್ಕೆ ಆಗುತ್ತಿಲ್ಲ. ಸ್ವಾರ್ಥ ಬಿಡಲು ಬಸವಾದಿ ಶರಣರು ಹಲವಾರು ವಚನಗಳನ್ನು ರಚಿಸಿದ್ದಾರೆ. ನಾವು ಯಾವ ಕುಲದಲ್ಲಿ ಹುಟ್ಟಿದ್ದೇವೆ ಎನ್ನುವುದು ಮುಖ್ಯವಲ್ಲ. ನಾನು ಹೇಗೆ ಸಮಾಜಕ್ಕೆ ದಾರಿದೀಪವಾಗಿ ಬಾಳಿ ಬದುಕುತ್ತೇನೆ ಎಂಬುವುದು ಮುಖ್ಯ ಎಂದರು.
ಬಸವಾದಿ ಶರಣರು ರಚಿಸಿರುವ ಸಾಹಿತ್ಯದಿಂದ ಮಾನವನ ಬದಲಾವಣೆ ಸಾಧ್ಯ. ಇಂಥ ಸಾಹಿತ್ಯವನ್ನು, ವಚನಗಳನ್ನು ಮಕ್ಕಳಿಗೆ ತಿಳಿಸಿ ಅರ್ಥ ಮಾಡಿಸಬೇಕು. ವಚನಗಳಲ್ಲಿರುವ ಅರಿವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೇಪಿಸಬೇಕು. ಸಮಾಜದಲ್ಲಿ ಒಗ್ಗಟ್ಟು ತಂದು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕೆಂದು ಹೇಳಿದರು.
ಚಿರಗಳ್ಳಿ ಜಗದ್ಗುರು ಮುರಳಶಂಕರ ದೇವರ ಗುರುಪೀಠದ ಸಿದ್ದಬಸವ ಕಬೀರ ಮಹಾಸ್ವಾಮಿಗಳು ವಿಶೇಷ ಉಪನ್ಯಾಸ ನೀಡಿ, ಕೆರೆ ಕಟ್ಟಿಸುವುದು, ಮದುವೆ ಮಾಡಿಸುವಂತಹ ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದ ಸಿದ್ದರಾಮೇಶ್ವರರನ್ನು ಅಲ್ಲಮಪ್ರಭುಗಳು ಮನಪರಿವರ್ತಿಸಿ ಸ್ವತ: ಕಾಯಕ ಮಾಡಿ ಅನ್ನದಾಸೋಹ ಮಾಡಲು ತಿಳಿಸುತ್ತಾರೆ. ಸಿದ್ದರಾಮೇಶ್ವರರನ್ನು ಅನುಭವ ಮಂಟಪಕ್ಕೆ ಕರೆತಂದು ಪರಿಶುದ್ಧರನ್ನಾಗಿಸಿ ಶೂನ್ಯ ಪೀಠದ ಅಧ್ಯಕ್ಷರನ್ನಾಗಿಸುತ್ತಾರೆ. ಅನುಭವ ಮಂಟಪದಲ್ಲಿ ಬಸವಣ್ಣನವರ ಮಾರ್ಗದರ್ಶನದಲ್ಲಿ ಶಿವಯೋಗಿ ಸಿದ್ದರಾಮೇಶ್ವರರು ಮನುಕುಲದ ಉದ್ಧಾರಕ್ಕೆ ಶ್ರಮಿಸುತ್ತ ಹಲವಾರು ವಚನಗಳನ್ನು ರಚಿಸಿದ್ದಾರೆ. ಅವುಗಳನ್ನು ಅರ್ಥೈಸಿಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಮಾತನಾಡಿ, ಸಿದ್ದರಾಮೇಶ್ವರರು ಹನ್ನೇರಡನೇ ಶತಮಾನದ ಇಂಜಿನೀಯರ ಆಗಿದ್ದರು. ಅವರು ತಮ್ಮ ಕಾಲದಲ್ಲಿ ಹಲವಾರು ಕೆರೆಗಳನ್ನು ಕಟ್ಟಿಸಿದ್ದಾರೆ. ಭೋವಿ, ವಡ್ಡರ ಸಮಾಜದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ನೆರವು ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶ್ರೀಶೈಲ ಸಾರಂಗ ಮಠದ ಪೂಜ್ಯ ಡಾ. ಸಾರಂಗಧರ ದೇಶಿಕೇಂದ್ರದ ಮಹಾಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ಜಿಲ್ಲಾ ಭೋವಿ (ವಡ್ಡರ್) ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಬಿ. ಕುಸ್ತಿ, ಮುಖಂಡರಾದ ಸುನೀಲ ವಲ್ಲಾಪುರೆ, ಆರ್.ಎಸ್. ಪಾಟೀಲ, ವೀರಣ್ಣ ಹೊನ್ನಳ್ಳಿ, ಅನೀಲ ಜಾಧವ, ಅಲ್ಲಮಪ್ರಭು ಪಾಟೀಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ನಂತರ ಸಚಿವರು ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆ ಚಾಲನೆ ನೀಡಿದರು.
ಜನವರಿ 16ರಂದು ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ
***********************************************************
ಕಲಬುರಗಿ,ಜ.15.(ಕ.ವಾ.)-ಕಾರ್ಯನಿರ್ವಾಹಕ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ವಿಭಾಗ ಕಲಬುರಗಿ ಕೇಂದ್ರ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ತೆಗೆದುಕೊಳ್ಳಲಾದ ಚಾಮನೂರ-ನರಿಬೋಳ ರಸ್ತೆಯಲ್ಲಿ ಬರುವ ಚಾಮನೂರ ಗ್ರಾಮದ ಹತ್ತಿರ ಹೊಸದಾಗಿ ಸೇತುವೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭವನ್ನು ಜನವರಿ 16ರಂದು ಮಧ್ಯಾಹ್ನ 3 ಗಂಟೆಗೆ ಜೇವರ್ಗಿ ತಾಲೂಕಿನ ನರಿಭೋಳ ಗ್ರಾಮದ ವೀರಭದ್ರೇಶ್ವರ ದೇವಾಲಯದ ಮೈದಾನದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಸಮಾರಂಭವನ್ನು ಉದ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ್ ಹಾಗೂ ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಜೇವರ್ಗಿ ಶಾಸಕ ಡಾ|| ಅಜಯಸಿಂಗ್ ಅಧ್ಯಕ್ಷತೆ ವಹಿಸುವರು.
ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಕೋಳನೂರ ಜಿಲ್ಲಾ ಪಂಚಾಯಿತಿ ಸದಸ್ಯ ಶಿವರಾಜ ಅಪ್ಪಾಸಾಹೇಬ ಪಾಟೀಲ, ನಾಲವಾರ ಜಿಲ್ಲಾ ಪಂಚಾಯಿತಿ ಸದಸ್ಯೆ ಸೋನಿಬಾಯಿ ವಿಠ್ಠಲ ಪವಾರ, ಜೇವರ್ಗಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಚಂದಮ್ಮ ಸಂಗಣ್ಣ, ಚಿತ್ತಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷ ಜಗದೇವರೆಡ್ಡಿ ಪ್ರೊ. ಪಾಟೀಲ, ಜೇವರ್ಗಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಗೊಲ್ಲಾಳಪ್ಪ ಸಿದ್ದಪ್ಪ ಪೂಜಾರಿ, ಚಿತ್ತಾಪುರ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಹೀರಾನಾಥ ಚವ್ಹಾಣ, ನರಿಬೋಳ ತಾಲೂಕು ಪಂಚಾಯಿತಿ ಸದಸ್ಯೆ ಅಯ್ಯಮ್ಮ ಮಹಾದೇವಪ್ಪ ಸೂಲಹಳ್ಳಿ, ಕಡಬೂರ ತಾಲೂಕು ಪಂಚಾಯಿತಿ ಸದಸ್ಯೆ ದಾನಮ್ಮ ಸಾಬಣ್ಣ, ನರಿಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಮರಿಸಲಿಂಗಪ್ಪ ಹಾಗೂ ಕಡಬೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾಬಾಯಿ ಗೋಪಾಲ ಜಾಧವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜನವರಿ 17ರಂದು ಗ್ರಾಮೀಣ ಕುಡಿಯುವ ನೀರು ಸರಬರಾಜು-ನೈರ್ಮಲ್ಯ
***************************************************************
ಉಪವಿಭಾಗದ ಕಲಬುರಗಿ ನೂತನ ಕಚೇರಿ ಕಟ್ಟಡ ಉದ್ಘಾಟನೆ
*****************************************************
ಕಲಬುರಗಿ,ಜ.15.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯಿತಿಯಿಂದ 2015-16ನೇ ಸಾಲಿನ 2515 ಯೋಜನೆ ಜಿಲ್ಲಾ ಪಂಚಾಯಿತಿ ಅನುದಾನದ ಅಡಿಯಲ್ಲಿ ಕಲಬುರಗಿ ನಗರದ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಕಚೇರಿ ಕಲಬುರಗಿ, ಪಂಚಾಯತ್‍ರಾಜ್ ಇಂಜನಿಯರಿಂಗ್ ಉಪವಿಭಾಗ ಕಲಬುರಗಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಉಪವಿಭಾಗ ಕಲಬುರಗಿ ನೂತನ ಕಚೇರಿ ಕಟ್ಟಡದ ಉದ್ಘಾಟನೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ವಸತಿ ಗೃಹದ ಅಡಿಗಲ್ಲು ಸಮಾರಂಭವನ್ನು ಜನವರಿ 17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಕುಸನೂರ ರಸ್ತೆಯಲ್ಲಿರುವ ಪಂಚಾಯತ್‍ರಾಜ್ ಇಂಜನಿಯರಿಂಗ್ ವಿಭಾಗದ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಸಮಾರಂಭವನ್ನು ಉದ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ|| ಶರಣಪ್ರಕಾಶ ಪಾಟೀಲ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಸಚಿವ ಹೆಚ್.ಕೆ. ಪಾಟೀಲ, ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅಧÀ್ಯಕ್ಷತೆ ವಹಿಸುವರು.
ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಅಫಜಲಪುರ ಶಾಸಕ ಮಾಲಿಕಯ್ಯ ವ್ಹಿ. ಗುತ್ತೇದಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ವಿಧಾನಸಭಾ ಶಾಸಕರುಗಳಾದ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ವಿಜಯಕುಮಾರ ಚವ್ಹಾಣ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಿ ಚನ್ನಮಲ್ಲಯ್ಯ ಹಿರೇಮಠ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ರಮೇಶ ಯಾಕಾಪುರ, ಜಿಲ್ಲೆಯ ಎಲ್ಲ ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲೂಕು ಪಂಚಾಯಿತಿ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
No comments:

Post a Comment