GULBARGA VARTHE

GULBARGA VARTHE

Saturday, 27 January 2018

NEWS AND PHOTO DATE: 27-01-2018

ಮಾರ್ಚ್ 4 ಹಾಗೂ 5ರಂದು ಮಳಖೇಡದಲ್ಲಿ ರಾಷ್ಟ್ರಕೂಟ ಉತ್ಸವ
**********************************************************************
ಕಲಬುರಗಿ,ಜ.27.(ಕ.ವಾ.)-ಮಳಖೇಡದ ರಾಷ್ಟ್ರಕೂಟರ ಗತವೈಭವವನ್ನು ಮೆಲಕು ಹಾಕಲು ಸರ್ಕಾರವು ರಾಷ್ಟ್ರಕೂಟ ಉತ್ಸವ ಹಮ್ಮಿಕೊಳ್ಳಲು ಅನುಮತಿಸಿದ್ದು, ಮಾರ್ಚ್ 4 ಹಾಗೂ 5ರಂದು ಎರಡು ದಿನಗಳ ಕಾಲ ಮಳಖೇಡದಲ್ಲಿ ರಾಷ್ಟ್ರಕೂಟ ಉತ್ಸವ ಏರ್ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ|| ಶರಣಪ್ರಕಾಶ ಪಾಟೀಲ ತಿಳಿಸಿದರು.
ಅವರು ಶನಿವಾರ ನಗರದ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ರಾಷ್ಟ್ರಕೂಟ ಉತ್ಸವದ ಸಿದ್ಧತೆಗೆ ಕರೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಈ ನಾಡಿನ ಸಾಹಿತಿಗಳು, ಕಲಾವಿದರು, ಅಧಿಕಾರಿಗಳು ಉತ್ಸುಕತೆಯಿಂದ ಪಾಲ್ಗೊಂಡು ಉತ್ಸವವನ್ನು ಯಶಸ್ವಿಗೊಳಿಸಬೇಕು. ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಘಟನಾ ಸಮಿತಿಗಳನ್ನು ರಚಿಸಿಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಇಲಾಖೆ, ವಿಶ್ವವಿದ್ಯಾನಿಲಯಗಳು ಉತ್ಸವವನ್ನು ಸಂಘಟಿಸಲು ಜವಾಬ್ದಾರಿ ವಹಿಸಬೇಕು. ಬಹುಮನಿ ಉತ್ಸವ ಸಹಿತ ಆಚರಿಸಲು ಚರ್ಚೆ ನಡೆಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ ಮಾತನಾಡಿ, ರಾಷ್ಟ್ರಕೂಟ ಉತ್ಸವ ಆಚರಿಸಲು ಸರ್ಕಾರ 30 ಲಕ್ಷ ರೂ. ಅನುದಾನ ನೀಡಿದೆ. ಉತ್ಸವವನ್ನು ಸಾಂಸ್ಕøತಿಕವಾಗಿ, ಶೈಕ್ಷಣಿಕವಾಗಿ ಹಾಗೂ ಐತಿಹಾಸಿಕವಾಗಿ ಆಚರಿಸಿದಲ್ಲಿ ತುಂಬಾ ಪರಿಣಾಮಕಾರಿಯಾಗುವುದು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರು ಮತ್ತು ಸಾಹಿತಿಗಳಿಗೆ ಆದ್ಯತೆ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಜವಾಬ್ದಾರಿವಹಿಸಲಾಗುವುದು ಎಂದರು.
ಈ ಭಾಗದ ಶಿರವಾಳ, ಸಂಗಾವಿ, ಸೇಡಂ, ಚಿತ್ತಾಪುರಗಳಲ್ಲಿರುವ ದೇವಾಲಯಗಳ ಕುರಿತು ಶಿಲ್ಪಕಲಾ ಪ್ರದರ್ಶನ ಏರ್ಪಡಿಸಬೇಕು. ಶಾಲಾ ಮತ್ತು ಕಾಲೇಜುಗಳಲ್ಲಿ ರಾಷ್ಟ್ರಕೂಟರ ಗತವೈಭವದ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ಉತ್ಸವದಲ್ಲಿ ವಿತರಿಸಬೇಕು. ಈ ಭಾಗದ ಸಾಹಿತಿಗಳಿಂದ ಪ್ರತಿ ಕಾಲೇಜಿನಲ್ಲಿ ಉಪನ್ಯಾಸಗಳನ್ನು ಏರ್ಪಡಿಸಬೇಕು. ರಾಷ್ಟ್ರಕೂಟರ ಚರಿತ್ರೆಯನ್ನು ದೃಶ್ಯ ರೂಪದಲ್ಲಿ ಪ್ರದರ್ಶಿಸಬೇಕು. ಧ್ವನಿ-ಬೆಳಕು ಕಾರ್ಯಕ್ರಮ ರೂಪಿಸಬೇಕು. ಈ ಭಾಗದ ಪ್ರತಿಭೆಗಳಿಗೆ ಉತ್ಸವದಲ್ಲಿ ಅವಕಾಶ ನೀಡಬೇಕೆಂದು ಸಾಹಿತಿಗಳು, ಕಲಾವಿದರು ಸಲಹೆ ನೀಡಿದರು. ಎರಡೂ ದಿನಗಳ ಕಾಲ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳ ಜವಾಬ್ದಾರಿ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ಕೇಂದ್ರೀಯ ವಿಶ್ವವಿದ್ಯಾಲಯ ವಹಿಸಿಕೊಳ್ಳುವುದು. ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರಕೂಟರ ಸಮಗ್ರ ಕೊಡುಗೆ ಬಗ್ಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಗ್ರಂಥಗಳನ್ನು ರಚಿಸುವುದು ಸೂಕ್ತ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ. ಜಿ.ಆರ್. ನಾಯಕ ತಿಳಿಸಿದರು.
ಸಭೆಯಲ್ಲಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಾಹಿತಿಗಳು, ಕಲಾವಿದರು ಮತ್ತಿತರು ಪಾಲ್ಗೊಂಡಿದ್ದರು.
ಆಮಿಷಕ್ಕೊಳಗಾಗದೇ ಮತ ಚಲಾಯಿಸಲು ಮನವಿ
*********************************************************
ಕಲಬುರಗಿ,ಜ.27.(ಕ.ವಾ.)-ಚುನಾವಣೆಯ ಸಂದರ್ಭದಲ್ಲಿ ಹಣ, ಜಾತಿ ಹಾಗೂ ಧರ್ಮದ ಹೆಸರು ಬಳಕೆ ಮಾಡಿಕೊಂಡು ಮತ ಕೇಳುವವರ ಸಂಖ್ಯೆ ಹೆಚ್ಚಾಗಿದ್ದು, ಮತದಾರರು ಈ ಯಾವುದೇ ಆಮಿಷಗಳಿಗೆ ಒಳಗಾಗದೇ ಮತ ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಕರೆ ನೀಡಿದರು.
ಅವರು ಶನಿವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಣ ಪಡೆದು ಮತ ಚಲಾಯಿಸುವುದು ಅಪರಾಧವಾಗಿದ್ದು, ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೇ ಮತ ಚಲಾಯಿಸುವುದರ ಮೂಲಕ ತಮಗೆ ಸೂಕ್ತ ವೆನಿಸಿದ ಅಭ್ಯರ್ಥಿಗೆ ಮತ ನೀಡಬೇಕು. ಶೇ. 100 ರಷ್ಟು ಮತದಾನವಾದರೆ ಸೂಕ್ತ ಅಭ್ಯರ್ಥಿ ಆಯ್ಕೆಯಾಗಬಹುದು. ಸೂಕ್ತ ಅಭ್ಯರ್ಥಿ ಆಯ್ಕೆಯಾದಲ್ಲಿ ದೇಶದ ಏಳಿಗೆ ಸಾಧ್ಯವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ 70 ಸಾವಿರಕ್ಕೂ ಹೆಚ್ಚು ಹೊಸ ಮತದಾರರ ನೋಂದಣಿಯಾಗಿದ್ದು, ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ 109 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 2267 ಮತಗಟ್ಟೆಗಳಿವೆ. ಮತದಾರರಲ್ಲಿನ ಗೊಂದಲ ನಿವಾರಣೆಗೆ ಈ ಬಾರಿ ಚುನಾವಣಾ ಆಯೋಗ “ವಿವಿ ಪ್ಯಾಟ್” ಹೊಸ ಯಂತ್ರ ಬಳಕೆ ಮಾಡುತ್ತಿದೆ. ಮತದಾರರು ಯಾವ ಅಭ್ಯರ್ಥಿಗೆ ತಾವು ಮತ ಚಲಾಯಿಸಿದ್ದೇವೆ ಎಂಬುವುದನ್ನು ಖಾತ್ರಿಪಡಿಸಿಕೊಳ್ಳಬಹುದಾಗಿದೆ. 7 ಸೆಕೆಂಡ್‍ಗಳವರೆಗೆ ವಿವಿ ಪ್ಯಾಟ್‍ಯಂತ್ರದಲ್ಲಿ ಇದನ್ನು ನೋಡಬಹುದಾಗಿದೆ ಎಂದರು.
ಮಾರ್ಚ್ ಕೊನೆಯ ವಾರದಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ಏಪ್ರಿಲ್ ಕೊನೆಯ ವಾರದಲ್ಲಿ ಇಲ್ಲವೇ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮಾತನಾಡಿ, ಸುಸ್ಥಿರ ಮತ್ತು ಜನಪರ ಸರ್ಕಾರ ಅಧಿಕಾರಕ್ಕೆ ತರಲು ದೇಶದ ಪ್ರತಿಯೊಬ್ಬ ನಾಗರಿಕನಿಗೆ ಮತದಾನ ಹಕ್ಕು ನೀಡಲಾಗಿದೆ. 18 ವರ್ಷ ಮೇಲ್ಟಟ್ಟ ಪ್ರತಿಯೊಬ್ಬರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಮತದಾರರು ಮತದಾನ ಮಾಡುವುದರ ಮೂಲಕ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡಲು ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಸ್ವೀಪ್ ಸಮಿತಿ ಈಗಾಗಲೇ ಮತದಾನದ ಬಗ್ಗೆ ಶಾಲಾ-ಕಾಲೇಜು ಹಂತದಿಂದಲೇ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಅತ್ಯುತ್ತಮ ಸೇವೆ ಸಲ್ಲಿಸಿದ ಬೂತ ಮಟ್ಟದ ಅಧಿಕಾರಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳು ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂದ ಸ್ಪರ್ಧೆ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ, ಕಲಬುರಗಿ ಸಹಾಯಕ ಆಯುಕ್ತ ಬಿ. ಸುಶೀಲಾ, ಜೇವರ್ಗಿ ತಹಶೀಲ್ದಾರ ಅಕೃತಿ ಸಾಗರ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಸ್ವಚ್ಛ ಭಾರತ ಸಂಯೋಜಕಿ ಗುರುಬಾಯಿ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಪಾಟೀಲ ವಂದಿಸಿದರು.
ವಾಕಥಾನ್ ರ್ಯಾಲಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನದ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಲು ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ. ಎಸ್.ಎಂ. ಪಂಡಿತರ ರಂಗಮಂದಿರವರೆಗೆ ಹಮ್ಮಿಕೊಂಡಿದ್ದ ವಾಕಥಾನ್ ರ್ಯಾಲಿ (ಪಾದಯಾತ್ರೆ) ಯಲ್ಲಿ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹ ರಕ್ಷಕದಳ, ಪೊಲೀಸ್ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸುಮಾರು 8 ಸಾವಿರಕ್ಕೂ ಈ ಹೆಚ್ಚು ಜನ ಪಾಲ್ಗೊಂಡಿದ್ದರು.
ಜನವರಿ 28ರಂದು ಮತದಾರರ ಪಟ್ಟಿ ವೀಕ್ಷಕರಿಂದ ಸಭೆ-
ಮತಕ್ಷೇತ್ರಗಳಿಗೆ ಭೇಟಿ
************************************************************
ಕಲಬುರಗಿ,ಜ.27.(ಕ.ವಾ.)-ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಚುನಾವಣಾ ಮತದಾರರ ಪಟ್ಟಿ ವೀಕ್ಷಕರಾದ ಮೊಹಮ್ಮದ್ ಮೊಹಸಿನ್ ಅವರು ಜನವರಿ 28 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಸಿದ್ಧಪಡಿಸುವಿಕೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ನಂತರ ಅಂದು ಬೆಳಿಗ್ಗೆ 11.30 ಗಂಟೆಗೆ ರಾಜಕೀಯ ಪಕ್ಷಗಳ ಮುಖಂಡರು/ಪ್ರತಿನಿಧಿಗಳೊಂದಿಗೆ ಸಭೆ ಹಾಗೂ ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕರಿಂದ ಮತದಾರರ ಪಟ್ಟಿ ಬಗ್ಗೆ ಸಲಹೆ ಸೂಚನೆ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 2.30 ಗಂಟೆಗೆ ವಿಧಾನಸಭಾ ಮತಕ್ಷೇತ್ರಗಳಿಗೆ ಭೇಟಿ ನೀಡುವರು.
ಫೆಬ್ರವರಿ 1ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ
ಕಲಬುರಗಿ,ಜ.27.(ಕ.ವಾ.)-ಕಲಬುರಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಚಿದೇವರ ಜಯಂತ್ಯೋತ್ಸವವನ್ನು ಗುರುವಾರ ಫೆಬ್ರವರಿ 1ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಶ್ರೀ ಮಡಿವಾಳ ಮಾಚಿದೇವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸುವರು. ಚಿಗರಳ್ಳಿ ಮರುಳಶಂಕರ ದೇವರ ಗುರುಪೀಠದ ಜಗದ್ಗುರು ಶ್ರೀ ಸಿದ್ದಬಸವ ಕಬೀರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸುವರು. ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಎಸ್. ಮುರುಗನ್, ಕಲಬುರಗಿ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಶಿವಪುತ್ರ ಎಸ್. ಮಲ್ಲಾಬಾದಕರ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಮಲ್ಲಣ್ಣ ಎಸ್. ಮಡಿವಾಳ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯ ಹುಮನಾಬಾದ ರಿಂಗ್‍ರೋಡನ ಶ್ರೀ ಮಡಿವಾಳ ಮಾಚಿದೇವರ ವೃತ್ತದಿಂದ ಪ್ರಾರಂಭವಾಗಿ ನೆಹರು ಗಂಜ್, ಕಿರಾಣಾ ಬಜಾರ, ಸುಪರ ಮಾರ್ಕೇಟ್, ಜಗತ್ ವೃತ್ತದ ಮಾರ್ಗವಾಗಿ ಡಾ. ಎಸ್.ಎಂ.ಪಂಡಿತ ರಂಗಮಂದಿರವರೆಗೆ ಮಡಿವಾಳ ಮಾಚಿದೇವರ ಭಾವಚಿತ್ರ ಮತ್ತು ವಿವಿಧ ಕಲಾ ಜಾನಪದ ಕಲಾ ತಂಡದ ಭವ್ಯ ಮೆರವಣಿಗೆ ಜರುಗುವುದು.
ಭೀಮಳ್ಳಿ ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ
*******************************************************************
ಆಹ್ವಾನ
*********
ಕಲಬುರಗಿ,ಜ.27.(ಕ.ವಾ.)-ಕಲಬುರಗಿ ತಾಲೂಕಿನ (ದ.ವ.) ಭೀಮಳ್ಳಿ ವಸತಿ ರಹಿತ ಆಂಗ್ಲ ಮಾಧ್ಯಮದ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ.) ದಲ್ಲಿ 2017-18ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗಾಗಿ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಅಥವಾ ತಿತಿತಿ.viಜಥಿಚಿvಚಿhiಟಿi.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯವನ್ನು ಹಾಗೂ ಆದರ್ಶ ವಿದ್ಯಾಲಯದ ಮುಖ್ಯ ಗುರುಗಳನ್ನು ಮೊಬೈಲ್ ಸಂಖ್ಯೆ 9945856685ನ್ನು ಸಂಪರ್ಕಿಸಲು ಕೋರಲಾಗಿದೆ.
ಪೊಲೀಸ್ ಕಾನ್ಸ್‍ಸ್ಟೇಬಲ್ ನೇಮಕಾತಿ: ಸಹಿಷ್ಣುತೆ ಮತ್ತು
***************************************************************
ದೇಹದಾಢ್ರ್ಯತೆ ಪರೀಕ್ಷೆ
**************************
ಕಲಬುರಗಿ,ಜ.27.(ಕ.ವಾ.)-ಕೆ.ಎಸ್.ಐ.ಎಸ್.ಎಫ್. ಘಟಕದ ಪೊಲೀಸ್ ಕಾನ್ಸ್‍ಸ್ಟೇಬಲ್ ಮತ್ತು ಕೆ.ಎಸ್.ಆರ್.ಪಿ. ಘಟಕದ ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಸ್ಟೇಬಲ್‍ಗಳ ಕ್ರಮವಾಗಿ 395 ಮತ್ತು 549 ಹುದ್ದೆಗಳ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.) ಯನ್ನು 2018ರ ಜನವರಿ 31 ರಿಂದ ಫೆಬ್ರವರಿ 3ರವರೆಗೆ ಕಲಬುರಗಿ ಜಿಲ್ಲಾ ಸಶಸ್ತ್ರ ಪೊಲೀಸ್ ಮೈದಾನದಲ್ಲಿ ನಡೆಯಲಿದೆ ಎಂದು ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಎಸ್. ಮುರುಗನ್ ತಿಳಿಸಿದ್ದಾರೆ
.
ಅಭ್ಯರ್ಥಿಗಳಿಗೆ ಈಗಾಗಲೇ ಹಾಜರಾತಿ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಲು ಬೆಂಗಳೂರಿನ ನೇಮಕಾತಿ ಮತ್ತು ತರಬೇತಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಈಗಾಗಲೇ ಸಂದೇಶವನ್ನು ರವಾನಿಸಲಾಗಿದೆ. ಅಭ್ಯರ್ಥಿಗಳು ತಮಗೆ ಹಾಜರಾತಿ ಪತ್ರದಲ್ಲಿ ನೀಡಿರುವ ಸೂಚನೆಗಳನ್ವಯ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ (ಇಟಿ ಆಂಡ್ ಪಿಎಸ್.ಟಿ.) ಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
ಜನವರಿ 30ರಂದು ಕಲಬುರಗಿ ಜಿಲ್ಲಾ ಮಟ್ಟದ ಯುವಜನ ಮೇಳ
********************************************************************
ಕಲಬುರಗಿ,ಜ.27.(ಕ.ವಾ.)-ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಲಬುರಗಿ ಹಾಗೂ ಬಂಜಾರಾ ಯುವಕ ಸಂಘ, ಚೌಕಿ ತಾಂಡಾ ಚಿತ್ತಾಪುರ ಇವುಗಳ ಸಂಯುಕ್ತಾಶ್ರಯದಲ್ಲಿ 2017-18ನೇ ಸಾಲಿನ ಕಲಬುರಗಿ ಜಿಲ್ಲಾ ಮಟ್ಟದ ಯುವಜನ ಮೇಳದ ಉದ್ಘಾಟನಾ ಸಮಾರಂಭವನ್ನು ಜನವರಿ 30ರಂದು ಮಧ್ಯಾಹ್ನ 12 ಗಂಟೆಗೆ ಚಿತ್ತಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ವಿಧಾನಸಭಾ ಶಾಸಕರುಗಳಾದ ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕಿ ಚನ್ನಮಲ್ಲಯ್ಯ ಹಿರೇಮಠ, ಚಿತ್ತಾಪುರ ಪುರಸಭೆ ಅಧ್ಯಕ್ಷೆ ಅನ್ನಪೂರ್ಣಾ ಭೀಮರಾಯ ಹೋತಿನಮಡಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಜಗದೇವರೆಡ್ಡಿ ಪೊಲೀಸ್ ಪಾಟೀಲ ರಾಮತೀರ್ಥ, ಚಿತ್ತಾಪುರ ಪುರಸಭೆ ಉಪಾಧ್ಯಕ್ಷೆ ಮಹ್ಮದ್ ರಸೂಲ ಮುಸ್ತಫಾ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಹರಿನಾಥ ಚವ್ಹಾಣ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಎಸ್. ಮುರುಗನ್, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಹಾಗೂ ರಾಷ್ಟ್ರ ಮತ್ತು ರಾಜ್ಯ ಯುವ ಪ್ರಶಸ್ತಿ ವಿಜೇತರು ಪಾಲ್ಗೊಳ್ಳುವರು.
No comments:

Post a Comment