GULBARGA VARTHE

GULBARGA VARTHE

Tuesday, 2 January 2018

News Date: 02--01--2018

ಪೌರಾಡಳಿತ ಸಚಿವರ ಪ್ರವಾಸ
****************************
ಕಲಬುರಗಿ,ಜ.02.(ಕ.ವಾ.)-ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಈಶ್ವರ ಬಿ. ಖಂಡ್ರೆ ಅವರು ಸೋಲಾಪುರ-ಯಶವಂತಪುರ ಎಕ್ಸ್‍ಪ್ರೆಸ್ ರೈಲಿನ ಮೂಲಕ ಜನವರಿ 3ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಸಚಿವರು ಬೆಳಿಗ್ಗೆ 8.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಯಾದಗಿರಿ ಜಿಲ್ಲೆಯ ಯನಾಗುಂದಿಗೆ ಪ್ರಯಾಣಿಸಿ, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಸಚಿವರು ಅಲ್ಲಿಂದ ಬೆಳಿಗ್ಗೆ 11.30 ಗಂಟೆಗೆ ರಸ್ತೆ ಮೂಲಕ ಯಾನಾಗುಂದಿಯಿಂದ ಬೀದರ ಜಿಲ್ಲೆಯ ಭಾಲ್ಕಿಗೆ ಪ್ರಯಾಣಿಸುವರು.
ಜನವರಿ 3ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
*********************************************
ಕಲಬುರಗಿ,ಜ.02.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ನಗರ ವಿಭಾಗದಿಂದ ಜನವರಿ 3ರಂದು ಕಲಬುರಗಿ ನಗರದ 11ಕೆ.ವಿ. ಟಿ.ವಿ. ಸ್ಟೇಷನ್, ಎಂ.ಎಸ್.ಕೆ. ಮಿಲ್ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ 11ಕೆ.ವಿ. ಪೊಲೀಸ್ ಕಾಲೋನಿ ಫೀಡರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯಕೈಗೊಳ್ಳುವ ಪ್ರಯುಕ್ತ ಅಂದು ಬೆಳಿಗ್ಗೆ 11 ಗಂಟೆಯಿಂದÀ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ವಿದ್ಯುತ್ ವ್ಯತ್ಯಯ ಉಂಟಾಗುವ ಫೀಡರ್ ವ್ಯಾಪ್ತಿಯ ಪ್ರದೇಶಗಳ ವಿವರ ಇಂತಿದೆ:- 11ಕೆ.ವಿ. ಟಿ.ವಿ.ಸ್ಟೇಶನ್: ಮುನಿಂ ಸಂಘ, ಕಾಕಡೆ ಚೌಕ್, ನಂದಿ ಕಾಲೋನಿ, ರೇವಣಸಿದ್ದೇಶ್ವರ ಕಾಲೋನಿ, ಭೀಮ ನಗರ, ಶಿವಾಜಿ ನಗರ, ರಾಮನಗರ ಮತ್ತು ಭವಾನಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಎಂ.ಎಸ್.ಕೆ.ಮಿಲ್: ಮದೀನಾ ಕಾಲೋನಿ, ನ್ಯೂ ಮದೀನಾ ಕಾಲೋನಿ, ಮಿಸ್‍ಬಾ ನಗರ, ಇಕ್ಬಾಲ್ ಕಾಲೋನಿ, ಹುಸೇನ್ ಗಾರ್ಡನ್, ಕೃಷ್ಣಾ ಮಿನರಲï್ಸ, ನ್ಯೂ ರಾಘವೇಂದ್ರ ಕಾಲೋನಿ, ಖಾನ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11ಕೆ.ವಿ. ಪೊಲೀಸ್ ಕಾಲೋನಿ: ಪೊಲೀಸ್ ಕಾಲೋನಿ, ಪೋಲಿಸ್ ಭವನ, ಏಶಿಯನ್ ಮಾಲ್, ಹಳೇ ಎಸ್.ಪಿ ಕಚೇರಿ, ಕುವೆಂಪು ನಗರ, ಬ್ಯಾಂಕ್ ಕಾಲೋನಿ, ಜಗತ್ ಏರಿಯಾ, ಪ್ರಶಾಂತ ನಗರ ಬಿ, ಹಳೇ ಆರ್.ಟಿ.ಓ. ಕಚೇರಿ ಯಿಂದ ರಾಜಾಪುರ ರಿಂಗ್ ರೋಡ್, ಶಕ್ತಿ ನಗರ ರಾಜಾಪುರ, ನಾಯ್ಡು ಲೇಔಟ್, ಪಿ.ಡಬ್ಲ್ಯೂ.ಡಿ. ಕ್ವಾರ್ಟರ್ಸ್, ಮತ್ತು ಸುತ್ತಮುತ್ತಲ್ಲಿನ ಪ್ರದೇಶಗಳು
ಜಾಣ ಜಾಣೆಯರ ಬಳಗ ರಚನೆಗಾಗಿ ಅರ್ಜಿ ಆಹ್ವಾನ
*********************************************
ಕಲಬುರಗಿ,ಜ.02.(ಕ.ವಾ.)-ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ “ಜಾಣೆ ಜಾಣೆಯರ ಬಳಗ”ವನ್ನು ರಚಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಕನಿಷ್ಠ 5 ರಿಂದ 15 ಜನರು ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 4 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳುತ್ತದೆ. ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ 5000ರೂ.ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು.
ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲ ಯೋಜನೆ ಹಾಗೂ ಕಾರ್ಯಕ್ರಮದಲ್ಲಿ ಈ ಜಾಣ ಜಾಣೆಯರ ಬಳಗವನ್ನು ತೊಡಗಿಸಿಕೊಳ್ಳಲಾಗುವುದು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ನ್ನು ಅಥವಾ ದೂರವಾಣಿ ಸಂಖ್ಯೆ 22107704/ 22484516ಗಳನ್ನು ಸಂಪರ್ಕಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 20ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೌಢಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲು ಅರ್ಜಿ ಆಹ್ವಾನ
********************************************************
ಕಲಬುರಗಿ,ಜ.02.(ಕ.ವಾ.)-ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ “ನನ್ನ ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದ್ದು, ಇದಕ್ಕಾಗಿ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ಶಾಲೆಗಳಲ್ಲಿ ನನ್ನ ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮವನ್ನು ನಡೆಸಲು ಪ್ರಾಧಿಕಾರವು 5000ರೂ.ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು.
ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಜನವರಿ 20ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮದ ನಡೆಸುವ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯವಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 20ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.comನ್ನು ಅಥವಾ ದೂರವಾಣಿ ಸಂಖ್ಯೆ 080-22484516/ 22107704ಗಳನ್ನು ಸಂಪರ್ಕಿಸಬಹುದಾಗಿದೆ.
ಉದ್ಯಮಶೀಲತಾ ಮತ್ತು ಅರಿವು ತರಬೇತಿಗಾಗಿ ಅರ್ಜಿ ಆಹ್ವಾನ
******************************************************
ಕಲಬುರಗಿ,ಜ.02.(ಕ.ವಾ.)-ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2017-18ನೇ ಸಾಲಿನ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಗಳಡಿ ವಿದ್ಯಾವಂತ ಯುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 7 ದಿನಗಳ ವಸತಿ ಸಹಿತ ತರಬೇತಿ, ತಲಾ 1 ದಿನದ ಅರಿವು ತರಬೇತಿ ಹಾಗೂ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಷ್ಟಿತ ಸಂಸ್ಥೆಗಳಾದ ಇಡಿಐ ಇಂಡಿಯಾ, ಗಾಂಧಿನಗರ ಗುಜರಾತ ಮತ್ತು ಎನ್‍ಐಎಂಎಸ್‍ಇ, ಹೈದ್ರಾಬಾದ್ ಸಂಸ್ಥೆಗಳು ಆಯೋಜಿಸುವ 7 ದಿನಗಳ ಉದ್ಯಮಶೀಲತಾ ತರಬೇತಿಯಲ್ಲಿ ಉದ್ಯಮಸೀಲತೆ ಬಗ್ಗೆ ಹಾಗೂ ಸ್ವ ಉದ್ಯೋಗ ಸ್ಥಾಪಿಸುವ ಬಗ್ಗೆ ತಿಳುವಳಿಕೆ ಹಾಗೂ ಜ್ಞಾನ ಹೆಚ್ಚಿಸುವ, ಸ್ವಂತ ಉದ್ಯಮವನ್ನು ಸ್ಥಾಪಿಸಿ ಕೈಗಾರಿಕಾ ವಲಯದ ಮುಖ್ಯ ವಾಹಿನಿಗೆ ಬರಲು ಮಾಹಿತಿ ನೀಡಲಾಗುತ್ತದೆ. ವಯೋಮಿತಿ 18 ರಿಂದ 25 ವರ್ಷದೊಳಗಿದ್ದು, ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ/ಡಿಪ್ಲೋಮಾ ಪದವಿ ಪಡೆದ ಅಥವಾ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗುವ ಆಸಕ್ತ ಸ್ವ-ಉದ್ಯೋಗ ಸ್ಥಾಪಿಸಲು ಆಸಕ್ತಿ ಹೊಂದಿರುವ ನಿರುದ್ಯೋಗಿಗಳು ತರಬೇತಿ ಪಡೆಯಲು ಅರ್ಹರಾಗಿದ್ದಾರೆ.
ಅದೇ ರೀತಿ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ದಿಮೆ ಸ್ಥಾಪಿಸಲು ಆಸಕ್ತಿ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಇಲಾಖೆಯಿಂದ ದೊರೆಯುವ ಪ್ರೋತ್ಸಾಹ ಮತ್ತು ರಿಯಾಯತಿಗಳ ಬಗ್ಗೆ ಅರಿವು ಮೂಡಿಸಲು ಒಂದು ದಿನದ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ತರಬೇತಿಯ ನಂತರ ಸ್ವಂತ ಉದ್ಯಮವನ್ನು ಸ್ಥಾಪಿಸಿ/ ಉನ್ನತೀಕರಿಸಿ ಕೈಗಾರಿಕಾ ವಲಯದಲ್ಲಿ ಮುಖ್ಯವಾಹಿನಿಗೆ ಬರಲು ಇದು ನೆರವಾಗಲಿದೆ. 18 ರಿಂದ 40 ವರ್ಷದೊಳಗಿನ ಕನಿಷ್ಟ ಎಸ್.ಎಸ್.ಎಲ್.ಸಿ. ಉತ್ತೀರ್ಣ/ಅನುತ್ತೀರ್ಣ ಅಭ್ಯರ್ಥಿಗಳು ತರಬೇತಿಗೆ ಹಾಜರಾಗಬಹುದಾಗಿದೆ.
ಇದಲ್ಲದೆ ಇದೇ ಆರ್ಥಿಕ ವರ್ಷದಲ್ಲಿ ಶೇ.60 ಸಹಾಯಧನ ಯೋಜನೆಯಡಿ ಸಾಲ ಪಡೆದ ಮತ್ತು ಸಾಲಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ಇತರೆ ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ದಿ ಜಾಗೃತಿ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ.
ಮೇಲ್ಕಂಡ ಉದ್ಯಮಶೀಲತಾ, ಅರಿವು ಕಾರ್ಯಕ್ರಮಗಳಿಗೆ ಹಾಜರಾಗಲು ಬಯಸುವ ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಭಾವಚಿತ್ರವನ್ನು ಲಗತ್ತಿಸಿ ಜನವರಿ 8ರೊಳಗಾಗಿ ಲಿಖಿತ ಅರ್ಜಿಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಂ.ಎಸ್.ಕೆ. ಮಿಲ್ ರಸ್ತೆ, ಜೇವರ್ಗಿ ಕ್ರಾಸ್ ಕಚೇರಿ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ದೂ.ಸಂ. 08472-223988, 221637ಗಳನ್ನು ಸಂಪರ್ಕಿಸಲು ಕೋರಲಾಗಿದೆ.

No comments:

Post a Comment