GULBARGA VARTHE

GULBARGA VARTHE

Thursday, 1 March 2018

news and photo Date: 1-3-2018

ಕೃಷಿ ಬೆಲೆ ಆಯೋಗದ ಅಧ್ಯಕ್ಷರ ಪ್ರವಾಸ
************************************
ಕಲಬುರಗಿ,ಮಾ.01.(ಕ.ವಾ.)- ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ. ಟಿ.ಎನ್. ಪ್ರಕಾಶ ಕಮ್ಮರಡಿ ಅವರು ಬೆಂಗಳೂರಿನಿಂದ ರೈಲಿನ ಮೂಲಕ ಮಾರ್ಚ್ 2ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿ ನಗರಕ್ಕೆ ಆಗಮಿಸುವರು.
ಅಂದು ಬೆಳಿಗ್ಗೆ 10 ಗಂಟೆಗೆ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿರುವ “ರೈತರ ಆದಾಯ ಮತ್ತು ಕಲ್ಯಾಣ ವೃದ್ಧಿಗೆ ಅಗತ್ಯವಾದ ಗ್ರಾಮೀಣ ನೈರ್ಮಲ್ಯ, ಮೂಲಭೂತ ಸೌಕರ್ಯ ಮತ್ತು ಸಾಮಾಜಿಕ” ವಿಚಾರಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2.30 ಗಂಟೆಗೆ ಶುಕ್ರವಾಡಿ ಗ್ರಾಮಕ್ಕೆ ಹಾಗೂ ಮಧ್ಯಾಹ್ನ 3.30 ಗಂಟೆಗೆ ರೈತರ ಆದಾಯ ಮತ್ತು ಕಲ್ಯಾಣ ವೃದ್ಧಿ ಯೋಜನೆಗೆ ಆಯ್ಕೆ ಮಾಡಿಕೊಂಡಿರುವ ಆಳಂದ ತಾಲೂಕಿನ ತೆಲ್ಲೂರ ಗ್ರಾಮಕ್ಕೆ ಭೇಟಿ ಮತ್ತು ರೈತರ ಜೊತೆ ಸಭೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಮಾರ್ಚ್ 3ರಂದು ಬೆಳಿಗ್ಗೆ 10 ಗಂಟೆಗೆ “ರೈತರ ಆದಾಯ ಮತ್ತು ಕಲ್ಯಾಣ ವೃದ್ಧಿಗೆ ಅಗತ್ಯವಾದ ಗ್ರಾಮೀಣ ನೈರ್ಮಲ್ಯ, ಮೂಲಭೂತ ಸೌಕರ್ಯ ಮತ್ತು ಸಾಮಾಜಿಕ” ವಿಚಾರಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲೆಯ ಪ್ರಮುಖ ಬೆಳೆಗಳಾದ ತೊಗರಿ, ಕಡಲೆ ಮತ್ತಿತರ ಬೆಳೆಗಳ ಮಾರುಕಟ್ಟೆ ಸ್ಥಿತಿಗತಿಗಳ ಕುರಿತು ಸಭೆ ನಡೆಸುವರು. ಅಂದು ರಾತ್ರಿ 9.05 ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ರಾಷ್ಟ್ರಕೂಟ ಉತ್ಸವ: ಲೋಗೋ ಬಿಡುಗಡೆ
**************************************
ಕಲಬುರಗಿ,ಮಾ.01.(ಕ.ವಾ.)-ರಾಷ್ಟ್ರಕೂಟರ ರಾಜಧಾನಿ ಮಳಖೇಡದಲ್ಲಿ ಇದೇ ಮಾರ್ಚ್ 4 ಮತ್ತು 5ರಂದು ಆಚರಿಸಲಾಗುತ್ತಿರುವ ರಾಷ್ಟ್ರಕೂಟ ಉತ್ಸವದ ಲೋಗೋವನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಗುರುವಾರ ಬಿಡುಗಡೆಗೊಳಿಸಿದರು.
ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಲೋಗೋವಲ್ಲದೇ ಪ್ರಚಾರಕ್ಕೆ ಬಳಸಲಾಗುವ ಪೋಸ್ಟರ್‍ಗಳನ್ನು ಸಹ ಸಚಿವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಉತ್ಸವದ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರಾಷ್ಟ್ರಕೂಟರ ಉತ್ಸವ: ವಹಿಸಲಾದ ಜವಾಬ್ದಾರಿ ಕಟ್ಟುನಿಟ್ಟಾಗಿ ನಿರ್ವಹಿಸಿ
***************************************************************
-ಆರ್.ವೆಂಕಟೇಶ ಕುಮಾರ
************************
ಕಲಬುರಗಿ ಮಾ.01 (ಕ.ವಾ):- ರಾಷ್ಟ್ರಕೂಟರ ರಾಜಧಾನಿ ಸೇಡಂ ತಾಲೂಕಿನ ಮಳಖೇಡದಲ್ಲಿ ಇದೇ ಮಾರ್ಚ್ 4 ಮತ್ತು 5ರ ರಂದು ಆಯೋಜಿಸಿರುವ ರಾಷ್ಟ್ರಕೂಟ ಉತ್ಸವದ ವ್ಯವಸ್ಥಿತ ಆಯೋಜನೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉತ್ಸವದ ನಿಮಿತ್ಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉತ್ಸವಕ್ಕೆ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಮಿತಿಗಳ ಸದಸ್ಯರು ಕೂಡಲೆ ಮಳಖೇಡಕ್ಕೆ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳು, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರೊಂದಿಗೆ ಸಮನ್ವಯತೆ ಸಾಧಿಸಿ ಉತ್ಸವದ ಪೂರ್ವಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಉತ್ಸವ ಮುಗಿಯುವವರೆಗೂ ಮಳಖೇಡದಲ್ಲಿಯೆ ವಾಸ್ಥವವಿದ್ದು ಉತ್ಸವದ ಯಶಸ್ವಿಗೆ ಶ್ರಮಿಸಬೇಕು ಎಂದ ಅವರು ಶುಕ್ರವಾರ ಪುನ: ಈ ಬಗ್ಗೆ ಕೈಗೊಂಡ ಎಲ್ಲ ಕಾರ್ಯಗಳ ಪರಿಶೀಲನೆ ಮಾಡುವುದಾಗಿ ತಿಳಿಸಿದರು.
ಉತ್ಸವದ ಯಶಸ್ವಿಗೆ ಸಾಂಸ್ಕøತಿಕ ಸಮಿತಿ, ಊಟ ಮತ್ತು ಕುಡಿಯುವ ನೀರಿನ ಸಮಿತಿ, ವಿಚಾರ ಸಂಕೀರ್ಣ ಸಮಿತಿ, ವಸ್ತು ಪ್ರದರ್ಶನ ಸಮಿತಿ, ಸಾರಿಗೆ ವ್ಯವಸ್ಥೆ, ವಸತಿ ಸಮಿತಿ, ಲೆಕ್ಕ ಸಮಿತಿ, ಪ್ರಚಾರ ಸಮಿತಿ ಹೀಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ಎಲ್ಲ ಸಮಿತಿಗಳ ಸಮಿತಿಗಳ ಮೇಲೆ ಮೇಲುಸ್ತುವಾರಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡ ಬಸವರಾಜ ಅವರ ನೇತೃತ್ವದಲ್ಲಿ ಸಂಘಟನಾ ಸಮಿತಿ ರಚಿಸಲಾಗಿದ್ದು, ಇವರ ಅಧೀನದಲ್ಲಿ ಉಳಿದ ಎಲ್ಲಾ ಸಮಿತಿಗಳು ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಎರಡು ದಿನಗಳ ಉತ್ಸವಕ್ಕೆ ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಉದ್ಘಾಟನೆ ನೆರವೇರಿಸಲಿದ್ದು, ಪದ್ಮಶ್ರೀ ಪುರಸ್ಕøತ ಇಬ್ರಾಹಿಂ ಸುತಾರ ವಿಶೇಷ ಆಹ್ವಾನಿತರಾಗಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಶ ಪಾಟೀಲ ಸೇರಿದಂತೆ ಶಿಷ್ಠಚಾರದಂತೆ ಸ್ಥಳೀಯ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಎರಡು ದಿನಗಳ ವರೆಗೆ ಕವಿ ಗೋಷ್ಠಿ, ಗೀತ ಗಾಯನ, ನಾಟಕ ಕಾರ್ಯಕ್ರಮಗಳು ಸ್ಥಳೀಯ ಹಾಗೂ ನಾಡಿನ ವಿವಿಧ ಕಲಾವಿದರಿಂದ Pನಡೆಯಲಿದ್ದು, ವಿವಿಧ ಮಳಿಗೆಗಳು ಸಗ ಸ್ಥಾಪನೆಗೊಳ್ಳಲಿವೆ. ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ, ಖ್ಯಾತ ಸಂಗೀತ ನಿರ್ದೇಶಕರಾದ ನವೀನ ಸಜ್ಜು, ಅನೂಪ ಸಿಳೀನ್, ಅರ್ಜುನ ಜನ್ಯಾ, ನಿರೂಪಣೆ ಖ್ಯಾತಿಯ ಅನುಶ್ರೀ ಸಾಂಸ್ಕøತಿಕ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದಾರೆ ಎಂದರು.
ಉತ್ಸವಕ್ಕೆ ಹೊರಜಿಲ್ಲೆಯಿಂದ ಆಗಮಿಸುವ ಅತಿಥಿ ಗಣ್ಯರಿಗೆ ಮತ್ತು ಕಲಾವಿದರಿಗೆ ವಸತಿ ವ್ಯವಸ್ಥೆ ಮಾಡಲಾಗಿದ್ದು, ಲೈಜನ್ ಅಧಿಕಾರಿಗಳು ಗಣ್ಯರ ಮ್ತತು ಕಲಾವಿದರ ಊಟೋಪಚಾರ ಹಾಗೂ ಸಾರಿಗೆ ವುವಸ್ಥೆ ಬಗ್ಗೆ ಗಮನಹರಿಸಬೇಕು. ಗಣ್ಯರು, ಕಲಾವಿದರು, ಪತ್ರಕರ್ತರು ಮ್ತತು ಸಾರ್ವಜನಿಕರಿಗೆ ಪ್ರತ್ಯೇಕ ಆಸನಗಳ ಮತ್ತು ಊಟದ ವ್ಯವಸ್ಥೆಯನ್ನು ಸರಿಯಾಗಿ ಮಾಡುವಂತೆ ಹಾಗೂ ಉತ್ಸವದ ಆವರಣದಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ಸ್ವಚ್ಛತೆಯ ಬಗ್ಗೆ ಹಾಗೂ ಉದ್ಘಾಟನೆ ದಿನದಂದು ಮಳಖೇಡ್ ಕೋಟೆಯಿಂದ ಮುಖ್ಯ ವೇದಿಕೆ ವರೆಗೆ ಬರುವ ಮೆರವಣಿಗೆಯ ಹಾದಿಯುದ್ದಕ್ಕು ಸ್ವಚ್ಛತೆ ಬಗ್ಗೆ ವಿಶೇಷ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಉತ್ಸವದ ಸಂಘಟನಾ ಸಮಿತಿ ಅಧ್ಯಕ್ಷ ದೊಡ್ಡಬಸವರಾಜ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಉತ್ಸವದ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ ಸೇರಿದಂತೆ ಅಧಿಕಾರಿಗಳು, ಉತ್ಸವದ ವಿವಿಧ ಸಮಿತಿಗಳ ಸದಸ್ಯರು ಹಾಜರಿದ್ದರು.
ಕಾರ್ಮಿಕ ಚೈತನ್ಯ ವಾಹಿನಿಗೆ ಜಿಲ್ಲಾಧಿಕಾರಿಗಳ ಹಸಿರು ನಿಶಾನೆ
******************************************************
ಕಲಬುರಗಿ ಮಾ.01(ಕ.ವಾ):-ಕಾರ್ಮಿಕರ ಹಕ್ಕು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಹತ್ತು ಹಲವಾರು ಯೋಜನೆಗಳನ್ನು ಸಾರ್ವಜಕರಲ್ಲಿ ಅರಿವು ಮೂಡಿಸುವ “ಕಾರ್ಮಿಕ ಚೈತನ್ಯ ವಾಹಿನಿ”ಗೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.
ಕಾರ್ಮಿಕ ಇಲಾಖೆ, ಕೌಶಲ್ಯಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರದಲ್ಲಿ ಈ ವಿಶೇಷ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎರಡು ಎಲ್.ಇ.ಡಿ. ವಾಹನಗಳು ಕಲಾತಂಡದೊಂದಿಗೆ ಸುಮಾರು 17 ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ 80 ಗ್ರಾಮಗಳು ಮತ್ತು ನಗರ ಪ್ರದೇಶದ 20 ವಾರ್ಡುಗಳು ಸೇರಿದಂತೆ ಒಟ್ಟು 100 ಬೀದಿ ನಾಟಕ ಕಾರ್ಯಕ್ರಮ ನೀಡಲಿವೆ. ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿ, ಆಶಾದೀಪ ಯೋಜನೆ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆ ಮತ್ತು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಗಳ ಬಗ್ಗೆ ಕವಿತಾ ತಿಪ್ಪಣ್ಣ ನೇತೃತ್ವದ ಕಲಾ ತಂಡವು ಸವಿಸ್ತಾರವಾಗಿ ಜನರಿಗೆ ಮಾಹಿತಿ ನೀಡಲಿದೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಮಹಾನಗರ ಪಾಲಿಕೆ ಆಯುಕ್ತ ರಘುನಂದನ ಮೂರ್ತಿ, ಸಹಾಯಕ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ, ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಉಪಸ್ಥಿತರಿದ್ದರು.
ರಾಷ್ಟ್ರಕೂಟ ಉತ್ಸವ: ಮಳಿಗೆ ಸ್ಥಾಪನೆಗೆ ಅವಕಾಶ
********************************************
ಕಲಬುರಗಿ,ಮಾ.01.(ಕ.ವಾ.)-ಸೇಡಂ ತಾಲೂಕಿನ ಮಳಖೇಡದಲ್ಲಿ ಮಾರ್ಚ್ 4 ಮತ್ತು 5ರಂದು ಏರ್ಪಡಿಸಲಾಗಿರುವ ರಾಷ್ಟ್ರಕೂಟ ಉತ್ಸವದಲ್ಲಿ ವಿವಿಧ ಮಳಿಗೆಗಳು ಸ್ಥಾಪಿಸಲು ಆಸಕ್ತರು ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ಉತ್ಸವದ ಆವರಣದಲ್ಲಿ ಪುಸ್ತಕ, ಆಹಾರ, ಜವಳಿ, ಸಿರಿಧಾನ್ಯ, ಆಲಂಕಾರಿಕ ವಸ್ತುಗಳು, ಕರ ಕುಶಲ ವಸ್ತುಗಳು, ವಿವಿಧ ಇಲಾಖೆಗಳು ತಮ್ಮ ಪ್ರಗತಿ ಸಾಧನೆ ಬಿಂಬಿಸುವ ಪ್ರಗತಿ ದರ್ಶನ ಸೇರಿದಂತೆ ಇನ್ನೀತರ ಮಳಿಗೆಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು 2000 ರೂ. ಶುಲ್ಕ ಪಾವತಿಸಿ ತಮ್ಮ ಹೆಸರುಗಳನ್ನು ಮಾರ್ಚ್ 2ರ ಸಾಯಂಕಾಲ ರೊಳಗಾಗಿ ಮುಕುಂದರೆಡ್ಡಿ ಪಾಟೀಲ, ಉಪನಿರ್ದೇಶಕರು (ಖಾಗ್ರಾ) ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಕಲಬುರಗಿ ಇಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ಮಳಿಗೆ ಸ್ಥಾಪನೆಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು. ಅದನ್ನು ಮಾರ್ಪಡಿಸಿದ್ದು, ಉಪನಿರ್ದೇಶಕರು (ಖಾಗ್ರಾ) ಇವರಲ್ಲಿ ಅರ್ಜಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448414366ಗೆ ಸಂಪರ್ಕಿಸಲು ಕೋರಿದೆ.
ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ:
*********************************
ಆಯ್ಕೆಯಾದ ಫಲಾನುಭವಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನ
******************************************************
ಕಲಬುರಗಿ,ಮಾ.01.(ಕ.ವಾ.)-ಸರ್ಕಾರದ ಮಹತ್ವದ ಯೋಜನೆಯಾದ “ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ” ಯಡಿ ಕಲಬುರಗಿ ತಾಲೂಕಿನಲ್ಲಿ ಈಗಾಗಲೇ ಮೊದಲನೇ ಹಂತದಲ್ಲಿ ಆಯ್ಕೆಯಾದ ಫಲಾನುಭವಿಗಳು ಕೂಡಲೇ ಮುಖ್ಯಮಂತ್ರಿಗಳ ಪತ್ರ, ಆಧಾರ ಕಾರ್ಡ ಪ್ರತಿ, ಬ್ಯಾಂಕ ಪಾಸ್‍ಬುಕ್ ಪ್ರತಿ, ಕಟ್ಟಡ ಕಾರ್ಮಿಕರಾಗಿದ್ದಲ್ಲಿ ಕಾರ್ಮಿಕ ಇಲಾಖೆಯಿಂದ ಪಡೆಯಲಾದ ಗುರುತಿನ ಚೀಟಿ ಹಾಗೂ ಪಡಿತರ ಚೀಟಿ ಪ್ರತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ತಹಶೀಲ್ದಾರ ಅಶೋಕ ಹಿರೋಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲನೇ ಹಂತದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಈಗಾಗಲೇ ಮುಖ್ಯಮಂತ್ರಿಗಳ ಸಹಿಯುಳ್ಳ ಪತ್ರವನ್ನು ತಲುಪಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಸಂರ್ಪಕಿಸಬೇಕು. ಆಯ್ಕೆಯಾದ ಫಲಾನುಭವಿಗಳ ಪಡಿತರ ಚೀಟಿಯಲ್ಲಿರುವ ಮಹಿಳಾ ಸದಸ್ಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದು, ಒಂದು ವೇಳೆ ಪಡಿತರ ಚೀಟಿಯಲ್ಲಿ ಮಹಿಳಾ ಸದಸ್ಯರು ಇಲ್ಲದೇ ಇದ್ದಲ್ಲಿ ಪುರುಷ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ತಪ್ಪಿದ್ದಲ್ಲಿ ಈ ಯೋಜನೆಯಿಂದ ವಂಚಿತರಾಗುತ್ತೀರಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 5ರಂದು ಉದ್ಯೋಗ ಮೇಳ
********************************
ಕಲಬುರಗಿ,ಮಾ.01.(ಕ.ವಾ.)-ಕಲಬುರಗಿ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಚೇರಿ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 5ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಅನುತ್ತೀರ್ಣ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ (ಮೆಕ್ಯಾನಿಕಲ್), ಬಿ.ಇ. (ಮೆಕ್ಯಾನಿಕಲ್), ಪದವೀಧರರು, ಎಂ.ಎಸ್ಸಿ., ಎಂ.ಎ., ಎಂ.ಕಾಂ., ಎಂಬಿಎ, ಲೈಬ್ರರಿ ಸೈನ್ಸ್ ಬಿ.ಎಸ್ಸಿ(ನರ್ಸಿಂಗ್), ಎ.ಎನ್.ಎಮ್., ಜಿ.ಎನ್.ಎಮ್. ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಮಾರ್ಚ್ 2ರಂದು ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟನೆ
*****************************************************
ಕಲಬುರಗಿ,ಮಾ.01.(ಕ.ವಾ.)-ಕರ್ನಾಟಕ ಕೃಷಿ ಬೆಲೆ ಆಯೋಗ ಬೆಂಗಳೂರು ಪ್ರಾಯೋಜಿತ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ ಕಲಬುರಗಿ ಹಾಗೂ ಕೃಷಿ ವಿಶ್ವವಿದ್ಯಾಲಯ ರಾಯಚೂರು ಇವುಗಳ ಸಂಯುಕ್ತಾಶ್ರಯದಲ್ಲಿ “ರೈತರ ಆದಾಯ ಮತ್ತು ಕಲ್ಯಾಣ ವೃದ್ಧಿಗೆ ಅಗತ್ಯವಾದ ಗ್ರಾಮೀಣ ನೈರ್ಮಲ್ಯ, ಮೂಲಭೂತ ಸೌಕರ್ಯ ಮತ್ತು ಸಾಮಾಜಿಕ” ವಿಚಾರಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರವನ್ನು ಮಾರ್ಚ್ 2 ಹಾಗೂ 3ರಂದು ಆಳಂದ ತಾಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ ಎಂದು ಕೃಷಿ ಬೆಲೆ ಆಯೋಗದ ಉಪ ಕೃಷಿ ನಿದೇರ್ಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 2ರಂದು ಬೆಳಿಗ್ಗೆ 10 ಗಂಟೆಗೆ ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಹೆಚ್.ಎಂ. ಮಹೇಶ್ವರಯ್ಯ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ. ಟಿ.ಎನ್. ಪ್ರಕಾಶ ಕಮ್ಮರಡಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಖ್ಯಾತ ವಿಜ್ಞಾನಿ ಡಾ. ಎಸ್.ಎ. ಪಾಟೀಲ, ಆಳಂದ ಶಾಸಕ ಬಿ.ಆರ್. ಪಾಟೀಲ, ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ರಾಯಚೂರ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಎಸ್.ಕೆ. ಮೇಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಕಾರ್ಯಾಗಾರದಲ್ಲಿ ರಾಜ್ಯದ ಎಂಟು ಜಿಲ್ಲೆಗಳ ರೈತರು, ತಜ್ಞರು, ವಿಜ್ಞಾನಿಗಳು ಹಾಗೂ ಇಲಾಖಾ ಅಧಿಕಾರಿಗಳು ಮತ್ತಿತರು ಪಾಲ್ಗೊಳ್ಳುವರು ಎಂದು ಅವರು ತಿಳಿಸಿದ್ದಾರೆ.
ಕ್ಲರ್ಕ್ ಹುದ್ದೆಗಳ ನೇಮಕಾತಿ: ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
*********************************************************
ಕಲಬುರಗಿ,ಮಾ.01.(ಕ.ವಾ.)-ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿಯಿರುವ ಎರಡು ಕ್ಲರ್ಕ್ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನಿಷ್ಠ ಪಿ.ಯು.ಸಿ. ಪಾಸಾಗಿರಬೇಕು. ಮಾಜಿ ಸೈನಿಕರು ಆರ್ಮಿ, ನೇವಿ ಹಾಗೂ ಏರ್‍ಫೋರ್ಸ್‍ನಲ್ಲಿ ಕ್ಲರ್ಕ್ ಹುದ್ದೆಯಲ್ಲಿ ಕೆಲಸ ನಿರ್ವಹಿಸಿರಬೇಕು. ಕನ್ನಡ ಮತ್ತು ಇಂಗ್ಲೀಷ ಭಾಷೆಗಳ ಜೊತೆಗೆ ಕಂಪ್ಯೂಟರ್ ಜ್ಞಾನದಲ್ಲಿ ಹೊಂದಿರಬೇಕು. ನೇಮಕಾತಿಯಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕರ ವಿಧವೆಯರು, ಮಾಜಿ ಸೈನಿಕರ ಅವಲಂಬಿತರಿಗೆ ಪ್ರಾತಿನಿಧ್ಯ ನೀಡಲಾಗುವುದು. ಮಾಜಿ ಸೈನಿಕರು, ಮಾಜಿ ಸೈನಿಕರ ವಿಧವೆಯರು, ಮಾಜಿ ಸೈನಿಕರ ಅವಲಂಬಿತರು ಇವರಲ್ಲಿ ಕನ್ನಡ ಪರಿಣಿತರು ಸಿಗದೇ ಇದ್ದಲ್ಲಿ ಅರ್ಹ ನಾಗರಿಕ ಅಭ್ಯರ್ಥಿಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಮಾರ್ಚ್ 9ರ ಸಂಜೆ 5 ಗಂಟೆಯೊಳಗಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಕಾಸ ಭವನ ಆವರಣ, ಕಲಬುರಗಿ-585102 ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-225003ನ್ನು ಸಂಪರ್ಕಿಸಬೇಕು. ಈ ನೇಮಕಾತಿ ಕುರಿತು ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು. ನಿರೀಕ್ಷೆಯ ಪ್ರಮಾಣದಲ್ಲಿ ಅರ್ಜಿಗಳು ಬಾರದೇ ಇರುವುದರಿಂದ ಮತ್ತೆ ಪುನ: ಅರ್ಜಿ ಕರೆಯಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರಿ-ಲಘು ವಾಹನ ಚಾಲನಾ ಹಾಗೂ ವಿವಿಧ ತಾಂತ್ರಿಕ ವೃತ್ತಿಗಳಲ್ಲಿ ತರಬೇತಿ:
********************************************************************
ಆನ್‍ಲೈನ್ ಮೂಲಕ ಹೆಸರು ನೋಂದಣಿಗೆ ಸೂಚನೆ
********************************************
ಕಲಬುರಗಿ,ಮಾ.01.(ಕ.ವಾ.)-ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ಕೇಂದ್ರ ಕಚೇರಿಯಿಂದ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ವಯೋಮಿತಿ 18 ರಿಂದ 35 ವರ್ಷದೊಳಗಿನ ಯುವಕ /ಯುವತಿಯರಿಗೆ 30 ದಿನಗಳ ಭಾರಿ ವಾಹನ ಚಾಲನಾ ಮತ್ತು 30 ದಿನಗಳ ಲಘು ವಾಹನ ಚಾಲನಾ ತರಬೇತಿ ಹಾಗೂ 90 ದಿನಗಳ ವಿವಿಧ ತಾಂತ್ರಿಕ ವೃತ್ತಿಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ತಿತಿತಿ.ಞಚಿushಚಿಟಞಚಿಡಿ.ಛಿom ವೆಬ್‍ಸೈಟ್ ಅಥವಾ ಞಚಿushಚಿಟಞಚಿಡಿ ಚಿಠಿಠಿ ಮೂಲಕ ಆನ್‍ಲೈನ್‍ನಲ್ಲಿ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಬೇಕೆಂದು ಸಂಸ್ಥೆಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯಗಳೊಂದಿಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಮನಾಬಾದ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಹಾಗೂ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಗರಿಬೊಮ್ಮನಹಳ್ಳಿ (ಮಾಲವಿ) ಚಾಲಕರ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಹತ್ತಿರದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದ ಆಡಳಿತಾಧಿಕಾರಿ, ಸಹಾಯಕ ಆಡಳಿತಾಧಿಕಾರಿಯವರ ವಿಭಾಗೀಯ ಕಚೇರಿ/ ಘಟಕ ವ್ಯವಸ್ಥಾಪಕರ ಕಚೇರಿ ಹಾಗೂ ತರಬೇತಿ ಕೇಂದ್ರಗಳಲ್ಲಿನ ನೋಂದಣಿ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸಂಸ್ಥೆಯ ವೆಬ್‍ಸೈಟ್ ತಿತಿತಿ.ಟಿeಞಡಿಣಛಿ.ಛಿom ನಲ್ಲಿ ಲಿಂಕ್ ಮೂಲಕವೂ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 7760992009, 9606448400 9731966877, 9945572341, 7760992008, 8197363533, 9964490282 ಗಳನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 4ರಂದು ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ
************************************************
ಹಾಗೂ ವಲಯ ಮೇಲ್ವಿಚಾರಕರ ಹುದ್ದೆಗೆ ಪರೀಕ್ಷೆ
******************************************
ಕಲಬುರಗಿ,ಮಾ.01.(ಕ.ವಾ.)-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ ಹೊರಗುತ್ತಿಗೆ ಮೇಲೆ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರ ಹಾಗೂ ವಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಮಾರ್ಚ್ 4ರಂದು ಕಲಬುರಗಿ ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ವಿಠ್ಠಲರಾವ ತುಕಾರಾಮ ಸುತ್ರಾವೆ ಸ್ಮಾರಕ ಪ್ರೌಢ ಶಾಲೆ (ರೋಟಿರಿ ಕ್ಲಬ್)ಯಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗೆ ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.15 ಗಂಟೆಯವರೆಗೆ ಹಾಗೂ ವಲಯ ಮೇಲ್ವಿಚಾರಕರ ಹುದ್ದೆಗೆ ಮಧ್ಯಾಹ್ನ 2.30 ರಿಂದ 3.45 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಅರ್ಧ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಪ್ರವೇಶ ಪತ್ರದೊಂದಿಗೆ ಆಧಾರ ಕಾರ್ಡ್ ಪ್ರತಿ ಹಾಜರುಪಡಿಸುವುದು ಕಡ್ಡಾಯವಾಗಿದ್ದು, ಆಧಾರ ಇಲ್ಲದಿದ್ದಲ್ಲಿ ಭಾವಚಿತ್ರಯಿರುವ ಡ್ರೈವಿಂಗ ಲೈಸೈನ್ಸ್, ಚುನಾವಣಾ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಇಲ್ಲದಿದ್ದಲ್ಲಿ ಅಭ್ಯರ್ಥಿಗಳಿಗೆ ಪ್ರವೇಶವನ್ನು ನಿರಾಕರಿಸಲಾಗುವುದು.
ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಇ-ಮೇಲ್ ಮೂಲಕ ಕಳಿಸಲಾಗಿದ್ದು, ಪ್ರವೇಶ ಪತ್ರ ತಲುಪದೇ ಇರುವ ಅಭ್ಯರ್ಥಿಗಳು ಞಚಿಟಚಿbuಡಿಚಿgi.ಟಿiಛಿ.iಟಿ ವೆಬ್‍ಸೈಟಿನಿಂದ ಡೌನಲೋಡ ಮಾಡಿಕೊಂಡು ಇತ್ತೀಚಿನ ಪಾಸ್‍ಪೋರ್ಟ್ ಸೈಜಿನ ಭಾವಚಿತ್ರವನ್ನು ಲಗತ್ತಿಸಿಕೊಂಡು ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ.
ಮೊಬೈಲ್ ನಿಷೇಧ: ಅಭ್ಯರ್ಥಿಗಳು ಮೊಬೈಲ್, ಟ್ಯಾಬ್, ಬ್ಲೂಟೂತ್, ಡಿಜಿಟಲ್ ವಾಚ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment