GULBARGA VARTHE

GULBARGA VARTHE

Wednesday, 7 March 2018

News and photo Date: 7--3--2018

ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಸಚಿವರ ಪ್ರವಾಸ
*********************************************
ಕಲಬುರಗಿ,ಮಾ.07.(ಕ.ವಾ.)-ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಮಾರ್ಚ್ 8ರಂದು ಬೆಳಿಗ್ಗೆ 5.39 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಸಚಿವರು ಅಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿ ಪಿ.ಟಿ.ಸಿ. ಕವಾಯತು ಮೈದಾನದಲ್ಲಿ ಮೂರನೆÉೀ ತಂಡದ ಸ್ಪೆಷಲ್ ಆರ್.ಎಸ್.ಐ./ ಆರ್.ಎಸ್.ಐ. ಮತ್ತು 9ನೇ ತಂಡದ ಸಿ.ಪಿ.ಸಿ. ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11.30 ಗಂಟೆಗೆ ಚಿತ್ತಾಪುರ ಪೊಲೀಸ್ ಠಾಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಮಾರ್ಚ್ 9 ರಿಂದ 11ರವರೆಗೆ ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಮಾರ್ಚ್ 12ರಂದು ಕಲಬುರಗಿ ಮತ್ತು ಸೇಡಂಗಳಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಅಂದು ರಾತ್ರಿ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ: ಹೆಸರು ನೋಂದಣಿಗೆ ಮಾರ್ಚ್ 12 ಕೊನೆ ದಿನ
***********************************************************************
ಕಲಬುರಗಿ, ಮಾರ್ಚ್ 07.(ಕ.ವಾ.)-ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನದೊಂದಿಗೆ 2017-18ನೇ ಸಾಲಿಗೆ ಕಡಲೆ ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿಸಲು ಈಗಾಗಲೇ ಪ್ರಾರಂಭಿಸಿರುವ 32 ಖರೀದಿ ಕೇಂದ್ರಗಳಲ್ಲಿ ನೋಂದಣಿ ಕಾರ್ಯವು ಪ್ರಗತಿಯಲ್ಲಿದ್ದು, ಹೆಸರು ನೋಂದಣಿಗೆ ಮಾರ್ಚ್ 12 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಪ್ರತಿ ಕ್ವಿಂಟಲ್‍ಗೆ 4,400 ರೂ. ದರದಂತೆ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಲ್ ಪ್ರಮಾಣದಲ್ಲಿ ಕಡಲೆ ಖರೀದಿಸಲಾಗುತ್ತಿದೆ. ಖರೀದಿ ಕೇಂದ್ರದ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲದೆ ಖರೀದಿ ಕೇಂದ್ರದ ಹತ್ತಿರದಲ್ಲಿರುವ ಹಳ್ಳಿಗಳ ರೈತರ ಹೆಸರುಗಳನ್ನು ಸಹ ಖರೀದಿ ಕೇಂದ್ರಗಳು ನೊಂದಾಯಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅವರ ಹೆಸರನ್ನು ನೋಂದಾಯಿಸಿಕೊಳ್ಳಲು ನಿರಾಕರಿಸಬಾರದು ಹಾಗೂ ಸರತಿಯಂತೆ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
****************************************************
ಕಲಬುರಗಿ,ಮಾ.07.(ಕ.ವಾ.)-ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ (ನಗರ ಮತ್ತು ಗ್ರಾಮೀಣ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಸ್ತ್ರೀಶಕ್ತಿ ಒಕ್ಕೂಟ ಕಲಬುರಗಿ, ಡಾನಬಾಸ್ಕೋ ಸಂಸ್ಥೆ, ದೇವದಾಸಿ ಪುನರ್ವಸತಿ ಕೇಂದ್ರ, ದಿವ್ಯ ಜೀವನ ನೆಟವರ್ಕ್, ಗೃಹ ಕಾರ್ಮಿಕರ ಸಂಘ, ಜೀವನ ಜ್ಯೋತಿ ಸಂಸ್ಥೆ, ಮಾರ್ಗದರ್ಶಿ ಸಂಸ್ಥೆ ಮತ್ತು ಸೇವಾ ಸಂಗಮ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8ರಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್ ಅಸಗರ್ ಚುಲಬುಲ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಎಸ್. ಮುರುಗನ್, ಸೇಡಂ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ಸುಶೀಲಾ, ಕಲಬುರಗಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಅಧ್ಯಕ್ಷೆ ಮಲ್ಲಮ್ಮ ಅಂಬಾರಾಯ ಕಡ್ಲಾ, ಕರ್ನಾಟಕ ಗೃಹ ಕಾರ್ಮಿಕರ ಒಕ್ಕೂಟ ಕಲಬುರಗಿ ಅಧ್ಯಕ್ಷೆ ಮಹಾದೇವಿ, ಕಲಬುರಗಿ ಸೇವಾ ಸಂಗಮದ ಪುಷ್ಪಾವತಿ ಪಿ. ಠಾಕೂರ, ಕಲಬುರಗಿ ಸ್ನೇಹಾ ಸಂಸ್ಥೆ ಅಧ್ಯಕ್ಷೆ ಮನೀಷಾ ಚವ್ಹಾಣ, ಕಲಬುರಗಿ ಸುಗ್ರಾಮ ಸಂಘಟನೆ ಜಿಲ್ಲಾಧ್ಯಕ್ಷೆ ಪರವಿನಾ ಬೇಗಂ, ಕಲಬುರಗಿ ಜೀವನ ಜ್ಯೋತಿ ಅಧ್ಯಕ್ಷೆ ಕೆರೆಮ್ಮಾ ನಾಟಿಕಾರ, ದೇವದಾಸಿ ಪುನರ್ವಸತಿ ಸಂಘ, ದುರ್ಗಾದೇವಿ ಸ್ವಸಹಾಯ ಸಂಘದ ಅಧ್ಯಕ್ಷೆ ಹುಲೆಗೆಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಅವರು ಮಹಿಳಾ ಸಬಲೀಕರಣ ಮತ್ತು ಅಭಿವೃದ್ಧಿ ವಿಷಯದ ಕುರಿತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರೀಕ್ಷಣಾಧಿಕಾರಿ ಭರತೇಶ ಬ.ಶೀಲವಂತರ ಅವರು ಮಹಿಳೆಯರ ಕಾನೂನುಗಳು ಮತ್ತು ಹಕ್ಕುಗಳು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು.
ವಕ್ಫ್ ಜಮೀನು ಪ್ರಕರಣ: ಜೂನ್ 27ರಂದು ವಿಚಾರಣೆ
***********************************************
ಕಲಬುರಗಿ,ಮಾ.07.(ಕ.ವಾ.)- ಛಿಲ್ಲಾ ಚಿತಾ ಶಾ ವಲಿ ಖಾನ್ ಬೌಲಿ ಪೇಠ ಚಿತಾಪುರ ಇವರು ವಕ್ಫ್ ಸಂಸ್ಥೆಗೆ ಸೇರಿದ ಸರ್ವೆ ನಂ. 35/2 ವಿಸ್ತೀರ್ಣ 03 ಎಕರೆ 15 ಗುಂಟೆ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯಲ್ಲಿ ಪ್ರತಿವಾದಿಯಾಗಿರುವ ಶ್ರೀ ಶಂಕರರಾವ (ಕಾನೂನುಬದ್ಧ ಉತ್ತರಾಧಿಕಾರಿ) ಶ್ರೀ ಶ್ರೀನಿವಾಸ ಕೋಂಕಡೆ ತಂ. ದಿ. ಶಂಕರರಾವ , ವಿಕಾಸ ನಿಕಾಸ ನಂ-1-1-118(ಹೊಸ ಸಂ.1-1-108)ಹೆಚ್.ಸ್ಪೋಕ್ಸ್ ನಂ.2/ಬಿ, ಸಪ್ನಾ ಬೇಕರಿ ಹತ್ತಿರ, ಬಸವೆಶ್ವರ ಕಾಲೋನಿ ಕಲಬುರಗಿ ಇವರ ವಿರುದ್ಧ ದೂರು ದಾಖಲಿಸಿರುತ್ತಾರೆ.
ಸದರಿ ದೂರಿನ ಕುರಿತು 2018ರ ಜೂನ್ 27ರಂದು ಮಧ್ಯಾಹ್ನ 3 ಗಂಟೆಗೆ ವಿಚಾರಣಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕರ್ನಾಟಕ ವಕ್ಫ್ ಬೋರ್ಡ್ ಇಲ್ಲಿ ನಡೆಯುವ ವಿಚಾರಣೆಗೆ ಖುದಾಗಿ ಅಥವಾ ವಕೀಲರ ಮೂಲಕ ಹಾಜರಾಗುವಂತೆ ಪ್ರತಿವಾದಿ ಶ್ರೀ ಶಂಕರ ಕೋನಖೇಡೆ ಇವರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೃಹ ಹಾಗೂ ಪ್ರವಾಸೋದ್ಯಮ ಸಚಿವರುಗಳಿಂದ
******************************************
674 ಲಕ್ಷ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ
**************************************************************
ಕಲಬುರಗಿ, ಮಾರ್ಚ್ 07(ಕ.ವಾ.)- ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಹಾಗೂ ಇನ್ನೀತರ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ 676.63 ಲಕ್ಷ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಮಾರ್ಚ್ 08 ರಂದು ಗುರುವಾರ ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಮತ್ತು ಗೃಹ ಸಚಿವ ರಾಮಲಿಂಗಾರೆಡ್ಡಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಚಿತ್ತಾಪುರ ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಈದ್ಗಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಾಗಾವಿ ಪ್ರವಾಸಿ ತಾಣವಾಗಿಸಲು 181.20 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಅಶೋಕನ ಮಹಾಸ್ತೂಪ ಲಭ್ಯವಾದ ಸನ್ನತಿ ಅಭಿವೃದ್ಧಿಗೆ 125.70 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಚಿತ್ತಾಪುರ ತಾಲ್ಲೂಕಿನ ಮಾಡಬೂಳ ಗ್ರಾಮದಲ್ಲಿ ರಸ್ತೆ ಬದಿ ಪ್ರಯಾಣಿಕರ ಅನುಕೂಲಕ್ಕಾಗಿ ರಸ್ತೆ ಬದಿ ತಂಗುದಾಣ ಸೌಲಭ್ಯ ಒದಗಿಸುವ 319.73 ಲಕ್ಷ ರೂ.ಗಳ ಬೃಹತ್ ಯೋಜನೆ ಚಾಲನೆ ಸಿಗಲಿದ್ದು, ಪ್ರವಾಸೋದ್ಯಮದಲ್ಲಿ ಇದು ಮೈಲುಗಲ್ಲಾಗಿದೆ. ಈ ಎಲ್ಲಾ ಕಾಮಗಾರಿಗಳು ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಮೂಲಕ ನಿರ್ಮಾಣ ಕಾರ್ಯ ನಡೆಯಲಿದೆ.
ಇದೇ ಸಂದರ್ಭದಲ್ಲಿ ಚಿತ್ತಾಪುರ ಪಟ್ಟಣದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನ ಹಾಗೂ ಕಂಪೌಂಡ್ ನಿರ್ಮಾಣಕ್ಕಾಗಿ 270 ಲಕ್ಷ ರೂ.ಗಳ ಕಾಮಗಾರಿಗೂ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಚಿತ್ತಾಪುರ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡಕ್ಕೂ ಶಿಲಾನ್ಯಾಸ ನೆರವೇರಿಸಲಾಗುತ್ತಿದೆ.
ಚಿತ್ತಾಪುರನಲ್ಲಿ ಉಚಿತ ವೈಫೈ: ಚಿತ್ತಾಪುರ ಪಟ್ಟಣದಲ್ಲಿ ವೈಫೈ ಸೌಲಭ್ಯವನ್ನು ಸಚಿವರು ಲೋಕಾರ್ಪಣೆ ಮಾಡಲಿದ್ದು, ವೈಫೈ ಸೌಲಭ್ಯ ಪಡೆದುಕೊಳ್ಳುತ್ತಿರುವ ರಾಜ್ಯದ ಮೊದಲ ಪುರಸಭೆ ಚಿತ್ತಾಪುರ ಆಗಲಿದೆ.
ಮಾರ್ಚ್ 13ರಂದು ಮನೋವೈದ್ಯರ ಹುದ್ದೆ ನೇಮಕಾತಿಗೆ ಸಂದರ್ಶನ
************************************************************
ಕಲಬುರಗಿ, ಮಾರ್ಚ್ 07(ಕ.ವಾ.)- ರಾಷ್ಟ್ರೀಯ ಅರೋಗ್ಯ ಅಭಿಯಾನ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಡಿ ಗುತ್ತಿಗೆ ಆಧಾರದ ಮೇಲೆ ಓರ್ವ ಮನೋವೈದ್ಯ ಹುದ್ದೆಯ ನೇಮಕಾತಿಗಾಗಿ ಮಾರ್ಚ್ 13ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಾಲಯದಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಮನೋವೈದ್ಯದಲ್ಲಿ ಡಿ.ಪಿ.ಎಂ./ ಡಿ.ಎನ್.ಬಿ./ ಎಂ.ಡಿ. ಪಾಸಾಗಿರಬೇಕು. ಮಾಸಿಕ 1,00,000 ರೂ.ಗಳ ವೇತನ ನೀಡಲಾಗುವುದು. ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳ ಕಾರ್ಯಾಲಯ, ಕುಷ್ಠರೋಗ ನಿರ್ಮೂಲನಾ ವಿಭಾಗ, ಕಲಬುರಗಿ ಕಚೇರಿಗೆ ಸಂಪರ್ಕಿಸಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಎಲ್ಲ ಮೂಲ ದಾಖಲೆಗಳು ಹಾಗೂ ಅದರ ಒಂದು ಸೆಟ್ ಜಿರಾಕ್ಸ್ ಯನ್ನು ಸ್ವಯಂ ದೃಢೀಕರಿಸಿ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ ದೂ.ಸಂ. 08472-278649 ಸಂಪರ್ಕಿಸಲು ಕೋರಲಾಗಿದೆ.
ಶ್ರೀಶೈಲಂ ಜಾತ್ರಾ ಮಹೋತ್ಸವಕ್ಕೆ ಹೆಚ್ಚುವರಿ ವಿಶೇಷ ವಾಹನಗಳ ಕಾರ್ಯಾಚರಣೆ
***********************************************************************
ಕಲಬುರಗಿ, ಮಾರ್ಚ್ 07(ಕ.ವಾ.)-ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-2 ರಿಂದ ಚಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂನಲ್ಲಿ ಮಾರ್ಚ್ 16 ರಿಂದ 21ರವರೆಗೆ ನಡೆಯುವ ಶ್ರೀಶೈಲಂ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವವು ಮತ್ತು ಮಾರ್ಚ್ 18ರಂದು ರಥೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಆಗಮಿಸುವ ಭಕ್ತಾಧಿಗಳು ಅನುಕೂಲಕ್ಕಾಗಿ ಮಾರ್ಚ್ 16ರಿಂದ 21ರವರೆಗೆ ಕಲಬುರಗಿ, ಆಳಂದ, ಜೇವರ್ಗಿ, ಗಾಣಗಾಪುರ, ಅಫಜಲಪುರಗಳಿಂದ ಶ್ರೀಶೈಲಂಗೆ ಹೆಚ್ಚುವರಿ (ವಿಶೇಷ) ಬಸ್‍ಗಳ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎ.ಹೆಚ್. ನಾಗೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಯಾವುದೇ ಗ್ರಾಮೀಣ ಪ್ರದೇಶಗಳಿಂದ ಶ್ರೀಶೈಲಂಗೆ ಹೋಗಬಯಸುವ ಕನಿಷ್ಟ 45-50 ಜನ ಪ್ರಯಾಣಿಕರಿದ್ದಲ್ಲಿ ಆಯಾ ವಿಭಾಗದ ಘಟಕ ವ್ಯವಸ್ಥಾಪಕರನ್ನು ಸಂಪರ್ಕಿಸಬೇಕಿಸಿದ್ದಲ್ಲಿ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು. ಸಂಸ್ಥೆಯ ವಿಭಾಗೀಯ ಸಂಚಾರ ಅಧಿಕಾರಿ ಮೊಬೈಲ್ ಸಂಖ್ಯೆ. 7760984086, ಸಹಾಯಕ ಸಂಚಾರ ವ್ಯವಸ್ಥಾಪಕರ ಮೊ.ಸಂ. 7760993920, ಕಲಬುರಗಿ ಘಟಕ-3 ವ್ಯವಸ್ಥಾಪಕರ ಮೊಬೈಲ್ ಸಂ. 7760992115, ಕಲಬುರಗಿ ಘಟಕ-2ರ ವ್ಯವಸ್ಥಾಪಕರ ಮೊ.ಸಂ. 7760992114, ಆಳಂದ ಘಟಕ ವ್ಯವಸ್ಥಾಪಕರ ಮೊ.ಸಂ. 7760992116, ಜೇವರ್ಗಿ ಘಟಕ ಘಟಕ ವ್ಯವಸ್ಥಾಪಕರ ಮೊಬೈಲ್ ಸಂ. 7760992118 ಹಾಗೂ ಅಫಜಲಪೂರ ಘಟಕ ವ್ಯವಸ್ಥಾಪಕರ ಮೊಬೈಲ್ ಸಂ. 7760992121 ಇರುತ್ತದೆ. ಸಾರ್ವಜನಿಕ ಭಕ್ತಾಧಿಗಳು ಜಾತ್ರಾ ವಿಶೇಷ ಬಸ್ಸುಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹಾಗೂ
*************************************
ಕಾರ್ಯಕ್ರಮ ಸಹಾಯಕರ ಹುದ್ದೆಗಾಗಿ ಅರ್ಜಿ ಆಹ್ವಾನ
***********************************************
ಕಲಬುರಗಿ ಮಾ.07 (ಕ.ವಾ):- ಕಲಬುರಗಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಕೋಶದಲ್ಲಿ ತಾತ್ಕಾಲಿಕವಾಗಿ ಸೃಜಿಸಲಾದ ತಲಾ ಓರ್ವ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹಾಗೂ ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಸಾಮಾಜಿಕ ವಿಜ್ಞಾನ, ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ, ಆರೋಗ್ಯ ನಿರ್ವಹಣೆ, ಆಡಳಿತ, ಸಮಾಜ ಕಾರ್ಯ, ಗ್ರಾಮೀಣ ಆಡಳಿತ ಇವುಗಳಲ್ಲಿ ಯಾವುದಾದರು ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಾಸಾಗಿರಬೇಕು. 35,000 ರೂ.ಗಳ ಮಾಸಿಕ ವೇತನ ನೀಡಲಾಗುವುದು. ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗೆ ಸಮಾಜ ವಿಜ್ಞಾನ, ಸಮಾಜ ಕಾರ್ಯ, ಗ್ರಾಮೀಣ ಆಡಳಿತ, ಸಂಖ್ಯಾ ಶಾಸ್ತ್ರ ಇವುಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಪಡೆದಿರಬೇಕು. 20,000ರೂ.ಗಳ ಮಾಸಿಕ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಎದುರುಗಡೆಯಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಅಂಕಪಟ್ಟಿ, ಅನುಭವ ಪ್ರಮಾಣಪತ್ರ ಹಾಗೂ ಕನಿಷ್ಠ ಆರು ತಿಂಗಳು ಕಂಪ್ಯೂಟರ್ ತರಬೇತಿ ಪಡೆದ ಬಗ್ಗೆ ಪ್ರಮಾಣಪತ್ರಗಳ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 24 ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278659ನ್ನು ಸಂಪರ್ಕಿಸಿ ಪಡೆಯಲು ಕೋರಲಾಗಿದೆ.
ಮಹಿಳಾ ದಿನಾಚರಣೆ ಅಂಗವಾಗಿ ವಿಶೇಷ ಕಾನೂನು ಅರಿವು ನೆರವು ಕಾರ್ಯಕ್ರಮ
**********************************************************************
ಕಲಬುರಗಿ ಫೆ.7.(ಕ.ವಾ)-ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಫರತಾಬಾದ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ ಅಂಗವಾಗಿ ಲೈಂಗಿಕ ಕಿರುಕುಳ ಪ್ರತಿಬಂಧಕ ಕೋಶದಿಂದ ಇದೇ ಮಾರ್ಚ್ 8 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ತಾಲೂಕಿನ ಫರತಾಬಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್ ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಫರತಾಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಲೇನೂರು ಗೀತಮಾಲ ಅಧ್ಯಕ್ಷತೆ ವಹಿಸುವರು. ಕಾಲೇಜಿನ ಸಾಂಸ್ಕøತಿಕ ಚಟುವಟಿಕೆಗಳ ಸಲಹೆಗಾರ ಡಾ. ಶಾರದಾದೇವಿ ಜಾಧವ, ನ್ಯಾಯಾವಾದಿಗಳ ಸಂಘದ ಅಧ್ಯಕ್ಷ ಆರ್.ಕೆ.ಹಿರೇಮಠ, ಫರತಾಬಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಕನ್ನಡÀ ಪ್ರಾಧ್ಯಾಪಕÀ ಡಾ. ಮಾಳಗಿ ಶರಣಪ್ಪ, ಹಿರಿಯ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ. ಶಿವಪುತ್ರ ಪೋತಲಕರ ಹಾಗೂ ಲೈಂಗಿಕ ಕಿರುಕುಳ ಪ್ರತಿಬಂಧಕ ಕೋಶದ ಸಂಯೋಜನಾಧೀಕಾರಿ ಸುಜಾತಾ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಮಾಲತಿ ರೇಶ್ಮಿ ಅವರು ಮಹಿಳೆಯರ ಹಕ್ಕುಗಳು ಮತ್ತು ಲೈಂಗಿಕ ಕಿರುಕುಳ ನಿಷೇದ ಕುರಿತು ಮಾತನಾಡುವರು.
ಮಾರ್ಚ್ 8ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
************************************************
ಕಲಬುರಗಿ.ಮಾ.7.(ಕ.ವಾ.)-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗದಿಂದ 11ಕೆ.ವಿ. ಗಣೇಶನಗರ ಹಾಗೂ ರಾಮನಗರ ಫೀಡರಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಮಾರ್ಚ್ 8ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸದರಿ ಕೇಂದ್ರದ ಮೇಲೆ ಬರುವ ಫೀಡರ್‍ಗಳ ವ್ಯಾಪ್ತಿಯ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಜೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
11 ಕೆ.ವಿ ಗಣೇಶ ನಗರ ಫೀಡರ್: ಎಂ.ಬಿ ನಗರ, ಬಾಕರ್ ಪಂಕ್ಷನ್ ಹಾಲ್, ಆದರ್ಶ ನಗರ ಕೆ.ಹೆಚ್.ಬಿ. ಲೇಔಟ್, ಗಣೇಶ ನಗರ, ಉಸ್ಮಾನಿಯಾ ಕಾಲೇಜ, ಜಾಗೃತಿ ಕಾಲೋನಿ, ಬಸವೇಶ್ವರ ಕಾಲೋನಿ, ಎಂ.ಜಿ.ರೋಡ, ಪ್ರಗತಿ ಕಾಲೋನಿ, ನ್ಯೂ ಜಿ.ಡಿ.ಎ. ವೀರೇಂದ್ರ ಪಾಟೀಲ್ ಬಡವಾಣೆ, ಬಾರೆಹಿಲ್ಸ್ , ಗ್ರೀನ್ ಹಿಲ್ಸ್, ಮೆಹತಾ ಲೇಔಟ್, ಸಿದ್ದೇಶ್ವರ ಕಾಲೋನಿ, ಎಂ.ಜಿ ರೋಡ್, ಗುಬ್ಬಿ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
11 ಕೆ.ವಿ ರಾಮಮಂದಿರ ಫೀಡರ್: ಸಿ.ಬಿ.ಐ.ಕಾಲೋನಿ, ಸದಾಶಿವ ನಗರ, ನವಜೀವನ ಸೊಸೈಟಿ ,ಕಲ್ಮಣಕರ್ ಲೇಔಟ್, ರಾಮಮಂದಿರ, ಕರುಣೇಶ್ವರನಗರ, ನವಣಿ ಲೇಔಟ್, ಸಂಗಮೇಶ್ವರ ಲೇಔಟ್, ದೇವಾನಗರ, ಓಜಾó ಕಾಲೋನಿ, ವಿವೇಕಾನಂದ ಕಾಲೋನಿ, ಲಕ್ಷ್ಮೀನಾರಾÀಯಣ ಲೇಔಟ್, ಶಿವ ಶಕ್ತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ
ಕಲಬುರಗಿ ಫೆ.7.(ಕ.ವಾ)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಿಬಿ ರಜಾ ಮಹಿಳಾ ಡಿಗ್ರಿ ಕಾಲೇಜು, ರಹೆನುಮಾ ಕಾನೂನು ಕೇಂದ್ರ, ಸಹಾರಾ ಸೇವಾ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಇದೇ ಮಾರ್ಚ್ 8 ರಂದು ಮಧ್ಯಾಹ್ನ 3.30 ಗಂಟೆಗೆ ಕಲಬುರಗಿ ಬಿಬಿ ರಜಾ ಮಹಿಳಾ ಪದವಿ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್ ಮಾಣಿಕ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಜೇಬಾ ಪರ್ವಿನ್ ಅಧ್ಯಕ್ಷತೆ ವಹಿಸುವರು. ಶಾಹೀನ್ ಗ್ರೂಪ್ ಇನ್ಸ್‍ಸ್ಟಿಟ್ಯೂಶನ್ ಡೈರೆಕ್ಟರ್ ಡಾ. ಖಮರ ಸುಲ್ತಾನಾ, ಸಹಾರಾ ಸೇವಾ ಸಂಸ್ಥೆಯ ನಿರ್ದೇಶಕ ಮಸ್ತಾನ್ ಬಿರಾದಾರ, ಸೇಡಂ ಪ್ರೊಬೇಷನರಿ ತಹಶೀಲ್ದಾರ ಅಂಜುಂ ತಬಸ್ಸುಮ್ ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನಾಗರತ್ನ ದೇಶಮಾನೆ ಹಾಗೂ ನ್ಯಾಯವಾದಿ ಮಾಲತಿ ರೇಶ್ಮಿ ವಿವಿಧ ವಿಷಯಗಳ ಕುರಿತು ಮಾತನಾಡುವರು.

No comments:

Post a Comment