GULBARGA VARTHE

GULBARGA VARTHE

Wednesday, 2 May 2018

news and photo date: 2-5-2018

ಮತದಾನಕ್ಕೆ ಕೌಂಟ್ ಡೌನ್-10
**********************************
ಸ್ವೀಪ್ ಸಮಿತಿಯಿಂದ ಜಿಲ್ಲೆಯ ಎಲ್ಲ ಮತದಾರರಿಗೆ ತಲುಪುವ ಪ್ರಯತ್ನ
***************************************************************
ಕಲಬುರಗಿ,ಮೇ.02.(ಕ.ವಾ.)-ಕಲಬುರಗಿ ಜಿಲ್ಲೆಯ ಎಲ್ಲ ಮತದಾರರಿಗೆ ತಲುಪುವ ಮೂಲಕ ಅವರಲ್ಲಿ ಮತದಾನದ ಜಾಗೃತಿ ಮೂಡಿಸಲು ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದರು.
ಅವರು ಬುಧವಾರ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾ ಸ್ವೀಪ ಸಮಿತಿ, ಅಮ್ಮಾ ಸಮಾಜ ಅಭಿವೃದ್ಧಿ ಸೇವಾ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆಯ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಲಬುರಗಿ ಜಿಲ್ಲೆಯಲ್ಲಿ ಮಾತ್ರ ರಾಜ್ಯಕ್ಕೆ ಮಾದರಿಯಾದ ಕೌಂಟ್ ಡೌನ್ ಎಂಬ ಕಾರ್ಯಕ್ರಮ ಹಮ್ಮಿಕೊಂಡು ಜಿಲ್ಲಾ ಸ್ವೀಪ ಸಮಿತಿಯಿಂದ ಪ್ರತಿ ದಿನ ವಿನೂತನ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.64 ಮತದಾನವಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಶೇ. 15 ರಿಂದ 20 ರಷ್ಟು ಮತದಾನ ಪ್ರಮಾಣ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಮತದಾರರಿಗೆ ಕಡ್ಡಾಯ ಮತ್ತು ನೈತಿಕ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ. ಮತದಾನಕ್ಕೆ ಕೇವಲ 10 ದಿನಗಳು ಉಳಿದಿದ್ದು, ಕಡ್ಡಾಯ ಮತದಾನದ ಕುರಿತು ಎಲ್ಲರೂ ಪ್ರಯತ್ನಿಸಬೇಕು ಎಂದರು.
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮಹ್ಮದ್ ಯುಸೂಫ್ ಮಾತನಾಡಿ, ಕಲಬುರಗಿ ನಗರದಲ್ಲಿ ಸ್ವೀಪ ಸಮಿಯಿಂದ 6 ತಂಡಗಳನ್ನು ರೂಪಿಸಿ ಪ್ರತಿ ಮನೆ ಮನೆಗೆ ಭೇಟಿ ನೀಡಲಾಗುತ್ತಿದೆ. ಎಲ್ಲ ಮನೆಗಳಿಗೆ ಕರ ಪತ್ರ ಹಂಚುವ ಮೂಲಕ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ. ಚುನಾವಣಾ ಕರ್ತವ್ಯವು ಒಂದು ವಿಶೇಷವಾದ ಹಾಗೂ ಪವಿತ್ರವಾದ ಕೆಲಸವಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಚುನಾವಣಾ ಕರ್ತವ್ಯವನ್ನು ಭಾರ ಎಂದು ಭಾವಿಸಬಾರದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಆರ್. ರೆಡ್ಡಿ ಮಾತನಾಡಿ, ಕಡ್ಡಾಯ ಮತದಾನದ ಕುರಿತು ಸಾರ್ವತ್ರಿಕವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಮೇ 10, 11 ಮತ್ತು 12 ರಂದು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರು ತಮ್ಮ ಮನೆ ಹಾಗೂ ಅಕ್ಕಪಕ್ಕದ ಮನೆಯವರು ತಮ್ಮ ಮನೆಯ ಅಂಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳ ಮುಂದೆ ಕಡ್ಡಾಯವಾಗಿ ಮತದಾನದ ಜಾಗೃತಿ ಮೂಡಿಸುವ ರಂಗೋಲಿ ಹಾಕಬೇಕು. ಅದರಲ್ಲಿ ಒಂದು ಚುನಾವಣಾ ಘೋಷ ವಾಕ್ಯ ಬರೆಯಬೇಕು. ಮೇ 4 ರಂದು ಸಾರ್ಯಕಾಲ 5 ಗಂಟೆಗೆ ಎಸ್.ವಿ.ಪಿ. ವೃತ್ತದಿಂದ ಜಗತ್ ವೃತ್ತದವರೆಗೆ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಕಲಬುರಗಿ ಕೃಷಿ ಸಹಾಯಕ ನಿರ್ದೇಶಕ ಅನೀಲ ರಾಠೋಡ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ, ಪರಮೇಶ್ವರ ಸೆಟಗಾರ, ಸುಭಾಷ ಚಕ್ರವರ್ತಿ, ನಾಗರತ್ನಾ ದೇಶಮಾನೆ, ಸಂದೀಪ ಮತ್ತಿತರ ಅಣ್ಯರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿ ಬೊಧಿಸಲಾಯಿತು.

No comments:

Post a Comment